Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಪಂಪಾಪುರ ಗ್ರಾಮದಲ್ಲಿ ಮುಳ್ಳು ಕಂಟಿಗಳಿಂದ ಮುಚ್ಚಿಹೋದ ಕೆರೆ ; ಹೂಳೆತ್ತಿ ರಸ್ತೆ ಸರಿಪಡಿಸಲು ಗ್ರಾಮಸ್ಥರ ಆಗ್ರಹ

---Advertisement---

ಹೊಳಲ್ಕೆರೆ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೇದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಪಾಪುರ ಗ್ರಾಮದಲ್ಲಿರುವ ಕೆರೆ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದು, ಕೆರೆಯನ್ನು ಸ್ವಚ್ಛಗೊಳಿಸಿ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪಂಪಾಪುರ ಗ್ರಾಮದ ಕೆರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮುಳ್ಳಿನ ಗಿಡಗಳು ಬೆಳೆದು ಕೆರೆ ಸಂಪೂರ್ಣವಾಗಿ ಆವೃತವಾಗಿದೆ. ಇದರಿಂದ ಜಾನುವಾರುಗಳಿಗೆ ನೀರು ಕುಡಿಯಲು ತೊಂದರೆಯಾಗುತ್ತಿದೆ. ಕೆರೆಯಲ್ಲಿ ಬೆಳೆದಿರುವ ಮುಳ್ಳಿನ ಗಿಡಗಳನ್ನು ತೆರವುಗೊಳಿಸಿ, ಅಗತ್ಯವಿರುವ ಕಡೆಗಳಲ್ಲಿ ಹೂಳು ತೆಗೆಸಿ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದಲ್ಲದೆ, ಕೆರೆಯ ಸುತ್ತಮುತ್ತಲಿನ ಜಮೀನುಗಳಿಗೆ ತೆರಳಲು ಸಮರ್ಪಕವಾದ ದಾರಿ ಇಲ್ಲದಿರುವುದರಿಂದ ರೈತರು ಕೂಡ ತೊಂದರೆ ಅನುಭವಿಸುತ್ತಿದ್ದಾರೆ. ಜಾನುವಾರುಗಳಿಗೆ ನೀರಿನ ಸೌಲಭ್ಯ ಹಾಗೂ ರೈತರಿಗೆ ಜಮೀನುಗಳಿಗೆ ತೆರಳಲು ಅನುಕೂಲವಾಗುವಂತೆ ಕೆರೆಯನ್ನು ಅಭಿವೃದ್ಧಿಪಡಿಸಿ, ಅಗತ್ಯ ದಾರಿ ನಿರ್ಮಿಸಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now