ಚಿತ್ರದುರ್ಗ, (ಆ.17) : ನಗರದ ಕೀರ್ತಿ ಆಸ್ಪತ್ರೆಯಲ್ಲಿ ಬುಧವಾರ ತಾಯಿಯೋರ್ವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಮಕ್ಕಳು ಆರೋಗ್ಯವಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ನಗರದ ಹೊಳಲ್ಕೆರೆ ರಸ್ತೆಯ ಮಾರಮ್ಮನ ದೇವಸ್ಥಾನದ ಸಮೀಪದ ವಾಸಿ ಆಯೇಷಾ ಶಹರೀನ್(22) ಎರಡು ಹೆಣ್ಣು ಮತ್ತು ಒಂದು ಗಂಡು ಮಗು ಸೇರಿದಂತೆ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಆಸ್ಪತ್ರೆಯ ನುರಿತ ವೈದ್ಯರ ತಂಡ ಯಶಸ್ವಿಯಾಗಿ ಸಿಸೇರಿಯನ್ ಹೆರಿಗೆ ಮಾಡಿದ್ದಾರೆ. ಸದ್ಯ ತಾಯಿ ಮತ್ತು ತ್ರಿವಳಿಗಳು ಆರೋಗ್ಯವಾಗಿರುವರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.