ಸುದ್ದಿಒನ್, ಚಿತ್ರದುರ್ಗ, ಜುಲೈ.21 : ತಾಲ್ಲೂಕಿನ ಕುಂಚಿಗಾನಾಳ್ ಸಮೀಪ ವ್ಯಕ್ತಿಯೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಮೃತನ ವಿಳಾಸ ಹಾಗೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಷ್ಟ್ರೀಯ ಹೆದ್ದಾರಿ ರಸ್ತೆ ಪಕ್ಕದಲ್ಲಿರುವ ನೇರಳೆ ಮರಕ್ಕೆ ವೈರ್ ಹಗ್ಗದ ದಿಂದ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಚಿತ್ರದುರ್ಗ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.






