ಚಿತ್ರದುರ್ಗ .ಜ.19: ಚಿತ್ರದುರ್ಗ ಡಿಎಆರ್ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎನ್.ಜಗದೀಶ್ (48) ಎಂಬ ವ್ಯಕ್ತಿಯು 2024ರ ಜನವರಿ 4ರಂದು ಕಾಣೆಯಾಗಿರುವ ಪ್ರಕರಣ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ ಇಂತಿದೆ. ಎಂ.ಎನ್.ಜಗದೀಶ್, 48 ವರ್ಷ, ಸುಮಾರು 5 3/4 ಅಡಿ ಎತ್ತರ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿರುತ್ತಾರೆ. ಕನ್ನಡ ಮತ್ತು ತೆಲಗು ಭಾಷೆ ಮಾತನಾಡುತ್ತಾರೆ. ಕಾಣೆಯಾದ ಸಮಯದಲ್ಲಿ ಹಸಿರು ಬಣ್ಣದ ಟಿ.ಶರ್ಟ್,ಕಪ್ಪು ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿರುತ್ತಾರೆ.
ಈ ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಕುರಿತು ಮಾಹಿತಿ ತಿಳಿದುಬಂದಲ್ಲಿ ಚಿತ್ರದುರ್ಗ ನಗರ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಎಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆ ಠಾಣಾಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















