ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ.ಜ.04: ಪ್ರಸವಪೂರ್ವ ಮತ್ತು ಗರ್ಭಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ (ಪಿಸಿ & ಪಿಎನ್‍ಡಿಟಿ)ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸಕ್ಷಮ ಪ್ರಾಧಿಕಾರ ಹಾಗೂ ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯು ಪಿಸಿ&ಪಿಎನ್‍ಡಿಟಿ ತಂಡದೊಂದಿಗೆ ಚಿತ್ರದುರ್ಗ ನಗರದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು, ಅಲ್ಲದೆ ಅಲ್ಲಿ ಕಂಡುಬಂದ ಕೆಲವು ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚನೆ ನೀಡಿತು.
ಪಿಸಿ&ಪಿಎನ್‍ಡಿಟಿ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಸಂಬಂಧ ರಾಜ್ಯ ಸಕ್ಷಮ ಪ್ರಾಧಿಕಾರ ಪಿಡಿಆರ್‍ಸಿಹೆಚ್ ಡಾ.ಶ್ರೀನಿವಾಸ್, ಜಿಲ್ಲಾ ತಪಾಸಣಾ ಮತ್ತು ಪರಿಶೀಲನಾ ಸಮಿತಿಯ ಅಧ್ಯಕ್ಷ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಪಿ.ರೇಣುಪ್ರಸಾದ್ ಹಾಗೂ ಸಮಿತಿಯ ಸದಸ್ಯರಾದ ಡಾ. ಸತ್ಯನಾರಾಯಣ, ವಿಷಯ ನಿರ್ವಾಹಕ ಹೆಚ್.ಬಿ.ಪೂಜಾರ್ ಅವರು ಚಿತ್ರದುರ್ಗ ನಗರದ ಕೀರ್ತಿ ಹಾಸ್ಟಿಟಲ್, ಆಫಿಯಾ ಆಸ್ಪತ್ರೆ ಮತ್ತು ಹಿಂದ್ ಲ್ಯಾಬ್‍ನ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಪರಶೀಲನೆ ನಡೆಸಲಾಯಿತು.
ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಷಿನ್‍ಗೆ ಸಂಬಂಧಿಸಿದಂತಹ ಎನ್‍ಎನ್‍ಸಿ ರಿಜಿಸ್ಟರ್, ರೆಫರಲ್ ಸ್ಲಿಪ್‍ಗಳು ಹಾಗೂ ಎಂಟಿಪಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಪರಿಶೀಲಿಸಲಾಯಿತು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್