ಚಿತ್ರದುರ್ಗ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಬಳಿ ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಒಂದೇ ಕುಟುಂಬದ ತಂದೆ, ತಾಯಿ ಇಬ್ಬರೂ ಮಕ್ಕಳು ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಾಗರಾಜ (46), ಶೈಲಜಾ (43), ಸಂತೋಷ (16), ವಿರೇಶ (13) ವರ್ಷ ಮೃತ ದುರ್ದೈವಿಗಳು.
ಮೃತರೆಲ್ಲರೂ ಭರಮಣ್ಣನಾಯಕ ದುರ್ಗಾ (ಬಿ.ದುರ್ಗ) ನಿವಾಸಿಗಳಾಗಿದ್ದು, ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದಲ್ಲಿ ಇರುವ ಭೂತಪ್ಪ ದೇವಿ ಮುಳ್ಳು ಗದ್ದಿಗೆ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನದ ಪೂಜೆಗೆ ಹೋಗಿದ್ದು, ಪೂಜೆ ಮುಗಿಸಿ ಸ್ವಗ್ರಾಮಕ್ಕೆ ಬೈಕ್ ನಲ್ಲಿ ಹಿಂತಿರುಗಿ ಬರುವಾಗ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಬಳಿ ಬುಧವಾರ ರಾತ್ರಿ 10 ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ಹೊಳಲ್ಕೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…