Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಭೀಕರ ರಸ್ತೆ ಅಪಘಾತ ; ಅಜ್ಜಿಯ ಮೃತದೇಹ ಸಾಗಿಸುವಾಗ ಟೈರ್ ಸ್ಪೋಟ, ಕಾರು ಪಲ್ಟಿ, ಮೂವರು ಸಾವು, ನಾಲ್ವರಿಗೆ ಗಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಿತ್ರದುರ್ಗ, ಜನವರಿ.19 : ಅಜ್ಜಿಯ ಮೃತದೇಹವನ್ನು ಸಾಗಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಮೂವರು ಸಾವನ್ನಪ್ಪಿದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ನಡೆದಿದೆ.

ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದ ಅಜ್ಜಿಯನ್ನು ಅಂತ್ಯಸಂಸ್ಕಾರ ಮಾಡಲು ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದಾನಸೂರು ಗ್ರಾಮದವರಾಗಿದ್ದು ಸುರೇಶ (40), ಮಲ್ಲಿಕಾರ್ಜುನ(25) 9 ವರ್ಷದ ಭೂಮಿಕ ಈ ಘಟನೆಯಲ್ಲಿ ಮೃತಪಟ್ಟಿದ್ದು , ನಾಗಮ್ಮ(31),  ತಾಯಮ್ಮ(56) ಧನರಾಜ್(39) ಹಾಗೂ ಕಾರು ಚಾಲಕ ಶಿವು (26) ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದು ಇವರನ್ನು ರಾಂಪುರ ಆಸ್ಪತ್ರೆ ದಾಖಲಿಸಲಾಗಿದೆ.

ಸುರೇಶ ಎನ್ನುವವರ ಅಜ್ಜಿ ಹುಲಿಗಮ್ಮ (66)ಇವರು ಶುಕ್ರವಾರ  ಬೆಂಗಳೂರಿನಲ್ಲಿ ಮೃತಪಟ್ಟಿದ್ದರು ಮೃತ ದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿರುವಾಗ ಈ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ದಾವಣಗೆರೆ ಪೂರ್ವ ವಲಯ ಐಜಿ ತ್ಯಾಗರಾಜನ್, ಎ. ಎಸ್.ಪಿ, ಚಳ್ಳಕೆರೆ ಡಿ ವೈ ಎಸ್ ಪಿ ಟಿ.  ಬಿ. ರಾಜಣ್ಣ, ರಾಂಪುರ ಪೊಲೀಸ್ ಠಾಣೆಯ ಪಿಎಸ್‍ಐ ಪರಶುರಾಮ್ ಲಮಾಣಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...