ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಿತ್ರದುರ್ಗ, ಜನವರಿ.19 : ಅಜ್ಜಿಯ ಮೃತದೇಹವನ್ನು ಸಾಗಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಮೂವರು ಸಾವನ್ನಪ್ಪಿದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ನಡೆದಿದೆ.
ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದ ಅಜ್ಜಿಯನ್ನು ಅಂತ್ಯಸಂಸ್ಕಾರ ಮಾಡಲು ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದವರು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದಾನಸೂರು ಗ್ರಾಮದವರಾಗಿದ್ದು ಸುರೇಶ (40), ಮಲ್ಲಿಕಾರ್ಜುನ(25) 9 ವರ್ಷದ ಭೂಮಿಕ ಈ ಘಟನೆಯಲ್ಲಿ ಮೃತಪಟ್ಟಿದ್ದು , ನಾಗಮ್ಮ(31), ತಾಯಮ್ಮ(56) ಧನರಾಜ್(39) ಹಾಗೂ ಕಾರು ಚಾಲಕ ಶಿವು (26) ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದು ಇವರನ್ನು ರಾಂಪುರ ಆಸ್ಪತ್ರೆ ದಾಖಲಿಸಲಾಗಿದೆ.

ಸುರೇಶ ಎನ್ನುವವರ ಅಜ್ಜಿ ಹುಲಿಗಮ್ಮ (66)ಇವರು ಶುಕ್ರವಾರ ಬೆಂಗಳೂರಿನಲ್ಲಿ ಮೃತಪಟ್ಟಿದ್ದರು ಮೃತ ದೇಹವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿರುವಾಗ ಈ ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ದಾವಣಗೆರೆ ಪೂರ್ವ ವಲಯ ಐಜಿ ತ್ಯಾಗರಾಜನ್, ಎ. ಎಸ್.ಪಿ, ಚಳ್ಳಕೆರೆ ಡಿ ವೈ ಎಸ್ ಪಿ ಟಿ. ಬಿ. ರಾಜಣ್ಣ, ರಾಂಪುರ ಪೊಲೀಸ್ ಠಾಣೆಯ ಪಿಎಸ್‍ಐ ಪರಶುರಾಮ್ ಲಮಾಣಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















