Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 36 ಅಪಘಾತ ವಲಯ, ಹೆಲ್ಮೆಟ್ ಅನುಷ್ಠಾನ ಕಡ್ಡಾಯ , ಅಗತ್ಯ ಮುನ್ನೆಚ್ಚರಿಕೆ ಕ್ರಮವಹಿಸಿ : ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಸೂಚನೆ

Facebook
Twitter
Telegram
WhatsApp

 

ಚಿತ್ರದುರ್ಗ, (ಅಕ್ಟೋಬರ್.12) : ಜಿಲ್ಲೆಯಲ್ಲಿ ಹೆಚ್ಚು ಅಪಘಾತ ಸಂಭವಿಸುವಂತಹ ಅಪಘಾತ ವಲಯಗಳಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 36 ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು, ಅಪಘಾತ ವಲಯಗಳಲ್ಲಿ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಥರ್ಮಲ್‍ಪ್ಲಾಸ್ಟ್ ಬಣ್ಣಬಳೆಯುವಿಕೆ, ಕ್ಯಾಟಐಸ್ ಅಳವಡಿಸುವಿಕೆ, ರಂಬಲ್‍ಸ್ಟ್ರೀಟ್ ಅಳವಡಿಕೆ, ಥರ್ಮಪ್ಲಾಸ್ಟ್ ಪೇಟಿಂಗ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳವುದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಬಾಲಕೃಷ್ಣ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿ 36 ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು, ಆದಾಗ್ಯೂ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇನ್ನೂ ಹೆಚ್ಚಿನದಾಗಿ ಅಪಘಾತ ವಲಯಗಳನ್ನು ಗುರುತಿಸಲು ಪೊಲೀಸ್, ಆರ್‍ಟಿಒ, ಲೋಕೋಪಯೋಗಿ ಇಲಾಖೆ ವತಿಯಿಂದ ತಂಡ ರಚನೆ ಮಾಡಬೇಕು.

ಸುಪ್ರೀಂ ಕೋರ್ಟ್ ನಿರ್ದೇಶನದನ್ವಯ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಬೇಕಾಗಿದೆ. ಹಾಗಾಗಿ ಅಪಘಾತ ವಲಯಗಳನ್ನು ಗುರುತಿಸುವುದು ಬಹಳ ಮುಖ್ಯವಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲೆಯಲ್ಲಿ ಅಪಘಾತ ವಲಯಗಳ ಗುರುತಿಸುವಿಕೆಯು ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕು. ಇದರ ಜೊತೆಗೆ ಈಗಾಗಲೇ ಗುರುತಿಸಿರುವ ಹಾಗೂ ಮುಂದಿನ ದಿನಗಳಲ್ಲಿ ಗುರುತಿಸಬೇಕಾಗಿರುವ ಅಪಘಾತ ವಲಯಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಮದ್ಯಪಾನ ಮಾಡಿ ವಾಹನ ಚಾಲನೆ, ತಪಾಸಣೆಗೆ ಸೂಚನೆ: ಮದ್ಯಪಾನ ವಾಹನ ಚಾಲನೆ ಮಾಡುವುದರಿಂದ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಹಾಗಾಗಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರನ್ನು ತಪಾಸಣೆ ಮಾಡಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಬಾಲಕೃಷ್ಣ ಸಭೆಗೆ ತಿಳಿಸಿದರು.

ಕೋವಿಡ್ ಕಾರಣದಿಂದಾಗಿ ಮದ್ಯಪಾನ ಮಾಡಿ ಚಾಲನೆ ಮಾಡುವವರನ್ನು ಪರಿಣಾಮಕಾರಿಯಾಗಿ ತಪಾಸಣೆ ಮಾಡಲು ಸಾಧ್ಯವಾಗಿಲ್ಲ. ಇನ್ನೂ ಮುಂದಾದರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರನ್ನು ತಪಾಸಣೆಗೊಳಪಡಿಸಬೇಕು ಎಂದರು.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರನ್ನು ತಪಾಸಣೆಗೊಳಪಡಿಸಬೇಕು. ತಪಾಸಣೆಗೊಳಪಡಿಸುವುರಿಂದ ಅಪಘಾತಗಳ ಸಂಖ್ಯೆ ಕಡಿಮೆಯಾಗಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯಕ್ರಮವಹಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸಮರ್ಪಕವಾಗಿ ನಾಮಫಲಕ ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯಲ್ಲಿ ಹೆಲ್ಮೆಟ್ ಅನುಷ್ಠಾನ ಕಡ್ಡಾಯವಾಗಲಿ: ಜಿಲ್ಲೆಯಲ್ಲಿ ಹೆಲ್ಮೆಟ್ ಅನುಷ್ಠಾನ ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿಲ್ಲ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿವೆ. ಅಕ್ಕಪಕ್ಕದ ಜಿಲ್ಲೆಗಳಲ್ಲಿ ಹೆಲ್ಮೆಟ್ ಅನುಷ್ಠಾನವಿದೆ. ಹಾಗಾಗಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಹೆಲ್ಮೆಟ್ ಅನುಷ್ಠಾನ ಕಡ್ಡಾಯಗೊಳಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಹೆಲ್ಮೆಟ್ ಬಳಸದೇ ವಾಹನ ಚಾಲನೆ ಮಾಡುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಎಲ್ಲ ಕಡೆ ಸಿಮೆಂಟ್ ರಸ್ತೆಗಳು ಆಗಿರುವುದರಿಂದ ಹೆಲ್ಮೆಟ್ ಇಲ್ಲದೇ ವಾಹನ ಚಲಾಯಿಸುವುದು ತುಂಬಾ ಅಪಾಯಕಾರಿ. ಹಾಗಾಗಿ ಜಿಲ್ಲೆಯಲ್ಲಿ ಹೆಲ್ಮೆಟ್ ಅನುಷ್ಠಾನವನ್ನು ಕಡ್ಡಾಯವಾಗಿ ಮಾಡಬೇಕು. ಬೈಕ್‍ಗಳಲ್ಲಿ ವೀಲಿಂಗ್ ಮಾಡುವುದು ಗಮನಕ್ಕೆ ಬಂದಿದ್ದು, ಇದರಿಂದ ಬೇರೆಯವರಿಗೆ ತೊಂದರೆಯಾಗುತ್ತಿದೆ. ಬೈಕ್‍ಗಳಲ್ಲಿ ವೀಲಿಂಗ್ ಮಾಡುವುದನ್ನು ತಡೆಗಟ್ಟುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೊಲೀಸ್ ಇಲಾಖೆ, ಸಾರಿಗೆ ಇಲಾಖೆಯು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮಗಳ ಪಾಲನೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಡಿವೈಎಸ್‍ಪಿ ರಮೇಶ್, ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿರಿ ವಿಜಯಕುಮಾರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

ಬಿ.ಎನ್.ಚಂದ್ರಪ್ಪನವರ ಗೆಲುವು ಖಚಿತ : ನಗುತಾ ರಂಗನಾಥ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು

error: Content is protected !!