Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವತಿ ಆತ್ಮಹತ್ಯೆ…!

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಮಕ್ಕಳ ಭವಿಷ್ಯ ಉತ್ತಮವಾಗಲಿ, ಮುಂದೆ ಚೆನ್ನಾಗಿ ಬಾಳಿ ಬದುಕಲಿ ಎಂಬುದೇ ಹೆತ್ತವರ ಹಾರೈಕೆಯಾಗಿರುತ್ತದೆ. ಅದಕ್ಕೆಂದೆ ಕಷ್ಟಪಟ್ಟು ಮಕ್ಕಳನ್ನ ಓದಿಸುತ್ತಾರೆ. ಇನ್ನೇನು ಮಗಳ ಭವಿಷ್ಯ ಉಜ್ವಲವಾಗುತ್ತದೆ. ಮಗಳ ಆನಂದವನ್ನು ನಾವೂ ಕಣ್ಣಾರೆ ಕಾಣಬಹುದು ಎಂದುಕೊಳ್ಳುವಾಗಲೇ ಮಕ್ಕಳು ಬಾರದಲೋಕಕ್ಕೆ ಹೋದರೆ ಆ ತಂದೆ ತಾಯಿಯ ಮನಸ್ಸು ಏನಾಗಬಹುದು..? ನೋವು ಎಷ್ಟಿರಬಹುದು‌. ಇಷ್ಟೆಲ್ಲಾ ಹೇಳೋದಕ್ಕೆ ಕಾರಣ ಓರ್ವ ಕಾಲೇಜು ವಿದ್ಯಾರ್ಥಿನಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ಖಾಸಗಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯುವತಿ ಆತ್ಮಹತ್ಯೆ ಬಳಿಕ ಹಲವು ವಿಚಾರಗಳ ಆರೋಪ ಕೇಳಿ ಬರುತ್ತಿದೆ. ಯುವಕನೊನ್ಬನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದೇ ಆರೋಪಿಸಲಾಗಿದೆ. ಆತ್ಮಹತ್ಯೆಗೆ ಶರಣಾದ ಯುವತಿಗೆ ಯುವಕನೊಬ್ಬ ಪ್ರೀತಿ‌ ಮಾಡುವಂತೆ ಪೀಡುಸುತ್ತಿದ್ದ ಎಂದು ಪೋಷಕರು ಆರೋಪ ಮಾಡಿದ್ದಾರೆ.

ಪ್ರಥಮ ಬಿಎಸ್ಸಿ ಓದುತ್ತಿದ್ದ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಯುವಕನೊಬ್ಬ ಪ್ರೇಮಾಗೆ ಪ್ರತಿದಿನ ಪ್ರೀತಿ ವಿಚಾರದಲ್ಲಿ ಟಾರ್ಚರ್ ನೀಡುತ್ತಿದ್ದನಂತೆ. ವಾಟ್ಸಪ್ನಲ್ಲಿ ನಿತ್ಯವೂ ಚಾಟಿಂಗ್ ಮಾಡಿ ಕಿರಿಕಿರಿ ಮಾಡುತ್ತಿದ್ದನಂತೆ. ಇದನ್ನು ತಾಳಲಾರದೆ ವಿದ್ಯಾರ್ಥಿನಿ ಇಂದು ಬೆಳಿಗ್ಗೆ ಕಾಲೇಜು ಕಟ್ಟಡದ ಮೇಲಿಂದ ಕೆಳಗೆ ಜಿಗಿದಿದ್ದಾರೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಆದರೂ ಚಿಕಿತ್ಸೆ ಫಲಿಸದೆ ಯುವತಿ ಸಾವನ್ನಪ್ಪಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜಿನ ಮುಂದೆ ಎಬಿವಿಪಿ ಕಾರ್ಯಕರ್ತರು ಕೂಡಾ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಪ್ಪ ಅಮ್ಮನ ಕನಸು ಕಮರಿದೆ, ಆ ಕಡೆ ಪ್ರೀತಿಯೂ ಸಿಕ್ಕಿಲ್ಲ. ಈ ಬಲವಂತದ ಪ್ರೀತಿ ಯಾಕೆ ಬೇಕು. ಪ್ರೀತಿ ಹುಟ್ಟಿದರೆ ಅದು ಜೋಪಾನವಾಗಿರಲಿ ಎಂದು ಬಯಸಬೇಕೆ ವಿನಃ ಈ ರೀತಿ ಬಲವಂತ ಮಾಡಿದರೆ ಒಂದು ದಿನ ನಷ್ಟವೇ ಆಗುವುದು. ಈ ರೀತಿ ಉದಾಹರಣೆಗಳು ಸಾಕಷ್ಟಿವೆ. ಸದ್ಯ ಆ ಸಂಬಂಧ ತನಿಖೆ ನಡೆಯುತ್ತಿದೆ. ಸತ್ಯ ಏನಿದೆ ಎಂಬ ವಿಚಾರ ವಿಚಾರಣೆಯ ಬಳಿಕ ತಿಳಿಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಳ ಮೀಸಲಾತಿಗೆ ವಿರೋಧಿಸಿದರೆ ಡಾ.ಬಿ.ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದಂತೆ : ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಮೀಸಲಾತಿಯನ್ನು ಒಪ್ಪಿಕೊಳ್ಳುವವರು ಒಳ ಮೀಸಲಾತಿಗೆ ವಿರೋಧಿಸಿದರೆ ಸಂವಿಧಾನಶಿಲ್ಪಿ ಡಾ.ಬಿ.ಅಂಬೇಡ್ಕರ್ ಆಶಯಗಳಿಗೆ ದ್ರೋಹವೆಸಗಿದಂತಾಗುತ್ತದೆಂದು

ಸಿರಿಗೆರೆ ವೈದ್ಯ ತಿಮ್ಮೇಗೌಡ ಅಪಘಾತದಲ್ಲಿ ಸಾವು : ನಾಳೆ ಚಳ್ಳಕೆರೆಯಲ್ಲಿ ಅಂತ್ಯಕ್ರಿಯೆ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರ ಸಿರಿಗೆರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಹಾಗೂ ಮಕ್ಕಳ ತಜ್ಞರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಜಿ.ಆರ್. ತಿಮ್ಮೇಗೌಡ (34ವರ್ಷ) ನಿನ್ನೆ(ಶನಿವಾರ) ರಾತ್ರಿ ದಾವಣಗೆರೆಯಿಂದ ಚಿತ್ರದುರ್ಗಕ್ಕೆ

ದಾವಣಗೆರೆಯಲ್ಲಿ ಭೀಕರ ಅಪಘಾತ : ಸಿರಿಗೆರೆ ವೈದ್ಯ ಡಾ.ತಿಮ್ಮೇಗೌಡ ಸಾವು

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಸ್ಥಳದಲ್ಲೇ ಸಾವನಪ್ಪಿದ್ದಾರೆ. ದಾವಣಗೆರೆ ಹೊರವಲಯದ ಬಾಡ ಕ್ರಾಸ್

error: Content is protected !!