Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 13 : ಅಪ್ರಾಪ್ತ ಬಾಕಿಯನ್ನು ಅಪಹರಣ ಮಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಗೆ
ಚಿತ್ರದುರ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಪೋಕ್ಸೋ ಕಾಯ್ದೆ ಅಡಿ 20 ವರ್ಷ ಕಠಿಣ ಸಜೆ ಮತ್ತು ರೂ. 10,000/- ರೂ ದಂಡ ವಿಧಿಸಿದೆ.

ಆರೋಪಿ ಹೊಳಲ್ಕೆರೆ ತಾಲ್ಲೂಕಿನ ಕೊಡಗವಳ್ಳಿ ಗ್ರಾಮದ
ಮಂಜುನಾಥ (33 ವರ್ಷ) ಈತ ಅಪ್ರಾಪ್ತ ಬಾಲಕಿಯನ್ನು ದಿನಾಂಕ 15.01.2024 ರಂದು ಮಧ್ಯಾಹ್ನದ ಸಮಯದಲ್ಲಿ ಬಲವಂತವಾಗಿ ಅಪಹರಣ ಮಾಡಿಕೊಂಡು ಹೋಗಿ ಹೊಳಲ್ಕೆರೆ ತಾಲ್ಲೂಕು ಮಾಳೇನಹಳ್ಳಿ ಗ್ರಾಮದ ಬಳಿ ಆಕೆಯ ಇಚ್ಛೆಯ ವಿರುದ್ಧವಾಗಿ ಅತ್ಯಾಚಾರಿ ಮಾಡಿದ್ದು ಈ ವಿಚಾರವಾಗಿ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ 2024 ರಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಎಂ.ಬಿ.ಚಿಕ್ಕಣ್ಣನವರ್ ರವರು ತನಿಖೆ ಪೂರೈಸಿ ಆಪಾದಿತನ ವಿರುದ್ಧ ಪೋಕ್ಸೋ ಕಾಯ್ದೆ ರೀತಿ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೋ) ಚಿತ್ರದುರ್ಗ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್ ಇವರು ಆರೋಪಿ ಮಂಜುನಾಥಗೆ ಭಾರತೀಯ ದಂಡ ಸಂಹಿತೆ ಕಲಂ 363, 506, 376 ಐಪಿಸಿ ಮತ್ತು ಕಲಂ 4 ಪೋಕ್ಸೋ ಕಾಯ್ದೆ ಅಡಿ 20 ವರ್ಷ ಕಠಿಣ ಸಜೆ ಮತ್ತು ರೂ. 10,000/- ರೂ ದಂಡ ವಿಧಿಸಿ ದಿನಾಂಕ 13.10.2026 ರಂದು ಅಂತಿಮ ತೀರ್ಪನ್ನು ನೀಡಿದೆ. ಮತ್ತು ನೊಂದ ಬಾಲಕಿಗೆ 4,00,000/ ರೂಪಾಯಿ ನೀಡಲು ಆದೇಶಿಸಿರುತ್ತಾರೆ. ಸರ್ಕಾರದ ಪರವಾಗಿ
ವಿಶೇಷ ಸರ್ಕಾರಿ ಅಭಿಯೋಜಕರಾದ (ಪೋಕ್ಸೋ)
ಹೆಚ್.ಆರ್‌ಜಗದೀಶ್ ಇವರು ವಾದ ಮಂಡಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now