ಸುದ್ದಿಒನ್, ಚಿತ್ರದುರ್ಗ : ಉಪನ್ಯಾಸಕರ ಖಾಯಂಗೊಳಿಸುವಂತೆ ABVP ಆಗ್ರಹ : ಕಪ್ಪುಪಟ್ಟಿ ಧರಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಚಿತ್ರದುರ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಚಿತ್ರದುರ್ಗ ಜಿಲ್ಲೆ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಉಪನ್ಯಾಸಕರ ಖಾಯಂಗೊಳಿಸುವಂತೆ ಆಗ್ರಹಿಸಿ ಇಂದು ವಿದ್ಯಾರ್ಥಿಗಳು ಕಪ್ಪುಪಟ್ಟಿ ಧರಿಸಿ ಕಾಲೇಜು ಪ್ರವೇಶಿಸುವ ಮೂಲಕ ಪ್ರತಿಭಟನೆ ನಡೆಸಿದರು.
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎದುರಾಗಿರುವ ಅಧ್ಯಾಪಕರ ಕೊರತೆ ಹಾಗೂ ಉಪನ್ಯಾಸಕರ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು, ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯಾದ್ಯಂತ ಬೃಹತ್ ಆಂದೋಲನವನ್ನು ಕೈಗೆತ್ತಿಕೊಂಡಿದೆ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಗೋಪಿ ರಂಗಸ್ವಾಮಿ ಹೇಳಿದ್ದಾರೆ.

ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರು ಇನ್ನೂ ಖಾಯಂ ನೇಮಕಾತಿಯ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಇದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಉಂಟಾಗಿ ವಿದ್ಯಾರ್ಥಿಗಳಿಗೆ ಸಮರ್ಪಕ ಶಿಕ್ಷಣ ದೊರೆಯುತ್ತಿಲ್ಲ. ಈ ಸಮಸ್ಯೆಯು ಶಿಕ್ಷಣದ ಗುಣಮಟ್ಟದ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ದೊಡ್ಡ ಧಕ್ಕೆಯಾಗುತ್ತಿದೆ ಎಂದು ಎಬಿವಿಪಿ ಆರೋಪಿಸಿದೆ.
ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರನ್ನು ಶೀಘ್ರದಲ್ಲೇ ಖಾಯಂಗೊಳಿಸಬೇಕು ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕೆಂದು ಎಬಿವಿಪಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಮುಖಂಡರು, ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಸಮರ್ಪಕ ಶಿಕ್ಷಣ ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರ ಕೂಡಲೇ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಉಪನ್ಯಾಸಕರನ್ನು ಖಾಯಂಗೊಳಿಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿ ಪರಿಷತ್ ಕರ್ನಾಟಕದಲ್ಲಿ ಒಂದು ವಾರದ ಕಾಲ ಈ ಆಂದೋಲನವನ್ನು ಹಮ್ಮಿಕೊಂಡಿದ್ದು, ಇಂದು ಕಪ್ಪುಪಟ್ಟಿ ಧರಿಸಿ ಕಾಲೇಜು ಪ್ರವೇಶಿಸುವುದು, ಪತ್ರ ಚಳುವಳಿ, ತರಗತಿ ಬಹಿಷ್ಕಾರ ಹಾಗೂ ರಾಜ್ಯಾದ್ಯಂತ ಬೃಹತ್ ಹೋರಾಟ ಮತ್ತು ಪ್ರತಿಭಟನೆಗೆ ಕರೆ ನೀಡಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳ ಸಮಸ್ಯೆಯನ್ನು ತಕ್ಷಣ ಬಗೆಹರಿಸಬೇಕೆಂಬ ಉದ್ದೇಶದಿಂದ ಎಬಿವಿಪಿ ಈ ಯೋಜನೆಯನ್ನು ತಯಾರಿಸಿಕೊಂಡಿದ್ದು, ಆಂದೋಲನದ ಮೂಲಕ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಯಾಗಿ ನಿಂತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯಕಾರ್ಯದರ್ಶಿ ಯದ ಗೋಪಿ ರಂಗಸ್ವಾಮಿ ಹಾಗೂ ಜಿಲ್ಲಾ ಸಂಚಾಲಕರಾದ ಕನಕರಾಜ್ ಕೋಡಿಹಳ್ಳಿ, ವಿಭಾಗ ಸಂಚಾಲಕರು ಸಂಜಯ್, ಸಾಮಾಜಿಕ ಜಾಲತಾಣ ಪ್ರಮುಖ ಆದರ್ಶ್, ಮಿಥುನ್ ಸುದರ್ಶನ್ ಸುದೀಪ್, ಪವಿತ್ರ, ಅಮೂಲ್ಯ, ಕಾವ್ಯ ಇತರರು ಇದ್ದರು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












