ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಜ. 02 : ಚೆಕ್ ಬೌನ್ಸ್ ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಶಿಕ್ಷಣ ಸಚಿವ ಮಧುಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು.
ಶಿಕ್ಷಣವೆಂದರೆ ‘ಮಾನವೀಯತೆಯ ವಿಕಾಸ, ಮನುಷ್ಯರಲ್ಲಿ ಪರಿಪೂರ್ಣತೆಯನ್ನು ತುಂಬುವುದೇ ಶಿಕ್ಷಣ. ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಹೊರ ಬರುತ್ತದೆ ಎಂದು ವಿವೇಕಾನಂದರು ಹೇಳುತ್ತಿದ್ದರು, ‘ಭಾರತದ ಎಲ್ಲ ಸಮಸ್ಯೆಗಳಿಗೂ ಶಿಕ್ಷಣ ಒಂದೇ ಪರಿಹಾರ’ ಎಂದು ನಂಬಿದ್ದರು ಆದರೆ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರು ಸಹಿತ ರಾಜ್ಯದ ಸರ್ಕಾರದ ಮಂತ್ರಿಗಳಾಗಿ ಮುಂದುವರೆದಿರುವುದು ವಿಷಾದನೀಯ ಈ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.
ಖಾಸಗಿ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ 2011 ರಲ್ಲಿ ರಾಜೇಶ ಎಕ್ಸಪೆÇೀರ್ಟ್ ಸಂಸ್ಥೆಗೆ 6.6 ಕೋಟಿ ರೂ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನಲೆಯಲ್ಲಿ ಮಧು ಬಂಗಾರಪ್ಪ ವಿರುಧ್ದ ದೂರು ದಾಖಲಿಸಿತ್ತು. ಈ ನಡುವೆ ಮಧು ಬಂಗಾರಪ್ಪಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 6.96 ಕೋಟಿ ರೂ ದಂಡ ವಿಧಿಸಿದ್ದು, ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ ಅನುಭವಿಸಲು ನ್ಯಾಯಾಲಯ ಆದೇಶಿಸಿದೆ. ಈ ರೀತಿ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿಯು ರಾಜ್ಯದ ಶಿಕ್ಷಣ ಇಲಾಖೆಗೆ ಕಪ್ಪು ಚುಕ್ಕೆ, ಇವರು ಈ ಇಲಾಖೆಯನ್ನು ಹೇಗೆ ನಿಭಾಯಿಸಲು ಸಾಧ್ಯವೇ ತಕ್ಷಣವೇ ರಾಜ್ಯದ ಮುಖ್ಯಮಂತ್ರಿಗಳು ಅವರ ರಾಜೀನಾಮೆ ಪಡೆಯಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ.
ಈ ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಪ್ರವೀಣ್.ಹೆಚ್.ಕೆ ರಾಜ್ಯ ಸಂಚಾಲಕ ಸಿದ್ದೇಶ್ ಯಾದವ್, ಚಿತ್ರಸ್ವಾಮಿ, ಮನೋಜ್, ರಾಘವೇಂದ್ರ, ಆಕಾಶ್, ಸಿಂಚನ, ಲಾವಣ್ಯ ಸೇರಿದಂತೆ ಇತರರು ಭಾಗವಹಿಸಿದ್ದರು.