ಚಿತ್ರದುರ್ಗ | ಹಾಸ್ಟಲ್ ಪ್ರವೇಶಾತಿ, ವಿದ್ಯಾರ್ಥಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಎಬಿವಿಪಿ ಒತ್ತಾಯ

1 Min Read

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ಹಾಸ್ಟಲ್ ಪ್ರವೇಶಾತಿ, ಸಮರ್ಪಕ ವಿದ್ಯಾರ್ಥಿ ವೇತನ ವಿತರಣೆ ಮತ್ತು ಪದವಿ ಕಾಲೇಜುಗಳಿಗೆ ಉಪನ್ಯಾಸಕರ ನೇಮಕಾತಿ ಮಾಡಲು ಆಗ್ರಹಿಸಿ ಜಿಲ್ಲಾಧಿಕಾರಿಗಳು, ಮುಖಾಂತರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಒತ್ತಾಯಿಸಿದೆ.

ಈಗಾಗಲೇ ರಾಜ್ಯದಲ್ಲೆಡೆ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಶುರುವಾಗಿ ಎರಡು ತಿಂಗಳು ಕಳೆದಿವೆ ಅದಷ್ಟೇ ಅಲ್ಲದೆ ಪದವಿ ವಿದ್ಯಾರ್ಥಿಗಳಿಗೂ ಸಹ ಈಗಾಗಲೇ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಗಿದು ತರಗತಿಗಳು ಪ್ರಾರಂಭವಾಗಿವೆ. ಹೀಗಿದ್ದರೂ ಕೂಡ ಇನ್ನೂ ಸಹಿತ ಹಾಸ್ಟಲ್ ಪ್ರವೇಶಾತಿಗಳು ಪ್ರಾರಂಭ ಆಗದೇ ಇರುವುದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಅದರಿಂದ ಈ ಕೂಡಲೇ ಹಾಸ್ಟಲ್ ಪ್ರವೇಶಾತಿಯನ್ನು ಆರಂಭಿಸಬೇಕೆಂದು ಮತ್ತು ಹಾಸ್ಟಲ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಲಾಯಿತು.

 

ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಸರ್ಕಾರದ  ವಿದ್ಯಾರ್ಥಿವೇತನಗಳು ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರೂ ಸಹ ವಿದ್ಯಾರ್ಥಿಗಳಿಗೆ ಕಳೆದ ೩ ವರ್ಷಗಳಿಂದ ಸಮರ್ಪಕವಾಗಿ ವಿದ್ಯಾರ್ಥಿ ವೇತನ ಬರದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಆದ್ದರಿಂದ ಸಮರ್ಪಕವಾಗಿ ವಿದ್ಯಾರ್ಥಿ ವೇತನ ನೀಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ಆಗ್ರಹಿಸುತ್ತದೆ.

 

ಪ್ರತಿ ವರ್ಷ ಪದವಿ ವಿದ್ಯಾರ್ಥಿಗಳಿಗೆ ಸೂಕ್ತವಾಗಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಅವರ ತರಗತಿಗಳು ಸಂಪೂರ್ಣವಾಗದೇ ಪರೀಕ್ಷೆಗಳಿಗೆ ಹಾಜರಾಗುವ ಪರಿಸ್ಥಿತಿ ಇದೆ. ಆದ್ದರಿಂದ ಈಗಾಗಲೇ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಪದವಿ ಕಾಲೇಜುಗಳು ಈಗಾಗಲೇ ತರಗತಿಗಳುಆರಂಭವಾಗಿದ್ದು ಆದ್ದರಿಂದ ಸರ್ಕಾರ ತಡ ಮಾಡದೆ ಕೂಡಲೇ ಉಪನ್ಯಾಸಕರ ಸಂಪೂರ್ಣ ನೇಮಕಾತಿಯನ್ನು ಮಾಡಬೇಕೆಂದು ಆಗ್ರಹಿಸುತ್ತದೆ.

 

ಈ ಬೇಡಿಕೆಗಳು ವಿದ್ಯಾರ್ಥಿಗಳಿಗ ದೃಷ್ಟಿಯಿಂದ ಬಹಳ ಮಹತ್ವಪೂರ್ಣವಾಗಿದ್ದು ಸರ್ಕಾರ ಈ ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ವಿದ್ಯಾರ್ಥಿ ಪರಿಷತ್‌ಆಗ್ರಹಿಸುತ್ತದೆ

 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಕನಕರಾಜ್ ಕೋಡಿಹಳ್ಳಿ, ಸಾಮಾಜಿಕ ಜಾಲತಾಣ ಚಿತ್ರಸ್ವಾಮಿ, ಕಾರ್ಯಕರ್ತರಾದ ದಯಾನಂದ್, ಮನೋಜ್, ಚರಣ್, ನಂದೀಶ್  ಇತರರು ಭಾಗವಹಿಸಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *