Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಚಿತ್ರದುರ್ಗ | ಬೆಳಗಟ್ಟ ಬಳಿ ಅಪಘಾತ ; ಇಬ್ಬರು ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 13 : ತಾಲ್ಲೂಕಿನ
ಬೆಳಗಟ್ಟ ಗ್ರಾಮದಲ್ಲಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.

ತುರುವನೂರಿನಿಂದ ಬೆಳಗಟ್ಟ ಮಾರ್ಗವಾಗಿ ಚಿತ್ರದುರ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಚಳ್ಳಕೆರೆ ತಾಲ್ಲೂಕಿನ
ಭೀಮಗೊಂಡನಹಳ್ಳಿ ಗ್ರಾಮದ (ಬೈರ ನಾಯಕನಹಟ್ಟಿ) ತಿಪ್ಪೇಸ್ವಾಮಿ (28 ವರ್ಷ) ಮತ್ತು ಪ್ರಭು ನಾಯಕ (42 ವರ್ಷ) ಎಂದು ಗುರುತಿಸಲಾಗಿದೆ. ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ತುರುವನೂರು ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಈ ಕುರಿತು ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

Join WhatsApp

Join Now

Join Telegram

Join Now