Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ದೊಡ್ಡಸಿದ್ದವ್ವನಹಳ್ಳಿ ಬಳಿ ಅಪಘಾತ : ಹಲವರಿಗೆ ಗಾಯ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 31 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಬಳಿ ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಹಲವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ಮಧ್ಯಾನ್ಹ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ NH 48, ದೊಡ್ಡಸಿದ್ದವ್ವನಹಳ್ಳಿ ಬಳಿ
ಬೆಂಗಳೂರು ಕಡೆಯಿಂದ ದಾವಣಗೆರೆಗೆ ಹೋಗುತ್ತಿದ್ದ ಲಾರಿ
ಚಿತ್ರದುರ್ಗದಿಂದ ದೊಡ್ಡಸಿದ್ದವ್ವನಹಳ್ಳಿಗೆ ಬರುತ್ತಿದ್ದ ಪ್ಯಾಸೆಂಜರ್ ಆಟೋಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now