Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕೆಎಸ್​​ಆರ್​ಟಿಸಿ ಬಸ್ ಡಿಪೋ ಬಳಿ ಅಪಘಾತ : ಶಾಲಾ ಮಕ್ಕಳಿಗೆ ಗಾಯ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ. 24 : ನಗರದ ಬಿ.ಡಿ. ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು 12 ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ.

ನಗರದ ಬಿ.ಡಿ.ರಸ್ತೆಯಲ್ಲಿ ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಕೆಎಸ್​​ಆರ್​ಟಿಸಿ ಡಿಪೋ ಒಳಗಿನಿಂದ ಮುಖ್ಯ ರಸ್ತೆಗೆ ಬಸ್ ಬರುತ್ತಿತ್ತು. ಈ ವೇಳೆ ಶರಣ ಬಸವೇಶ್ವರ ಶಾಲಾ ಮಕ್ಕಳನ್ನು ಸ್ಟೇಡಿಯಂಗೆ ಕರೆದುಕೊಂಡು ಹೋಗುತ್ತಿದ್ದ ಆಪೇ ವಾಹನವು ಬಸ್ ಗೆ ಡಿಕ್ಕಿ ಹೊಡೆದಿದೆ. ಆಟೋ ಮಗುಚಿಬಿದ್ದು ವಾಹನದಲ್ಲಿದ್ದ ಶಾಲಾ ಮಕ್ಕಳಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣವೇ ಅಲ್ಲಿದ್ದ ಸ್ಥಳೀಯರು ಶಾಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್ ಪೂರ್ವ ತಯಾರಿ ಅಂಗವಾಗಿ ಶಾಲಾ ಮಕ್ಕಳು ಶರಣ ಬಸವೇಶ್ವರ ಶಾಲೆಯಿಂದ ಒನಕೆ ಓಬವ್ವ ಕ್ರೀಡಾಂಗಣಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪ್ರಕರಣ ದಾಖಲಿಸಲಾಗಿದೆ.

ಆಸ್ಪತ್ರೆಗೆ ಎಸ್.ಪಿ. ರಂಜಿತ್ ಕುಮಾರ್ ಬಂಡಾರು, ಅಡಿಷನಲ್ ಎಸ್.ಪಿ. ಡಾ. ಶಿವಕುಮಾರ್, ಡಿಡಿಪಿಐ, ಬಿಇಓ ಸೇರಿದಂತೆ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now