Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಸೀಬಾರ ಬಳಿ ಅಪಘಾತ : ಮೂವರು ಸಾವು

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 01 : ನಗರದ ಹೊರವಲಯದ ಸೀಬಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಆರು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಅರ್ಜುನ(28 ವರ್ಷ), ಶ್ರೀಧರ್ (30 ವರ್ಷ) ಮತ್ತು ಮತ್ತು ಶರವಣ(30 ವರ್ಷ) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾ‌ರ್, ರಮೇಶ್ ಮತ್ತು ಗೌತಮ್ ಎಂದು ತಿಳಿದು ಬಂದಿದೆ. ಇವರೆಲ್ಲರೂ ತಮಿಳುನಾಡಿನ ಕೃಷ್ಣಗಿರಿ ಮೂಲದವರು. ಪ್ರವಾಸಕ್ಕೆಂದು ಗೋವಾಕ್ಕೆ ತೆರಳುತ್ತಿದ್ದಾಗ ಸೀಬಾರ ಬಳಿ ಟೈರ್ ಸ್ಫೋಟಗೊಂಡು ಕಾರು ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ದುರ್ಘಟನೆ ನಡೆದಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...