Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಜೋಗಿಮಟ್ಟಿ ರಸ್ತೆಯಲ್ಲಿ ಅಪಘಾತ: ಮೂರು ವರ್ಷದ ಮಗು ಸಾವು

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 18 : ನಗರದ ಜೋಗಿಮಟ್ಟಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ ಮೂರು ವರ್ಷದ ಅರ್ಹತ್ ಬೋರಾ ಎಂಬ ಮಗು ಸಾವನ್ನಪ್ಪಿದ ದಾರುಣ ಘಟನೆ ಇಂದು ಬೆಳಿಗ್ಗೆ 9 : 45 ರ ವೇಳೆಗೆ ನಡೆದಿದೆ.

ನಗರದ ಜೈನ್ ಕಾಲೋನಿ ನಿವಾಸಿ ಯಶವಂತ್ ಬೋರಾ ಅವರ ಮಗು ಅರ್ಹತ್ ಬೋರಾ ಈ ಘಟನೆಯಲ್ಲಿ ಮೃತಪಟ್ಟ ಮಗು ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ ಜೋಗಿಮಟ್ಟಿ ರಸ್ತೆಯ ಖಾಸಗಿ ಶಾಲೆಯೊಂದರಲ್ಲಿ ಮೂರು ವರ್ಷದ ಮಗುವನ್ನು ಶಾಲೆಗೆ ಬಿಡಲು ಹೋದಾಗ ಈ ದುರ್ಘಟನೆ ನಡೆದಿದೆ. ಬೈಕ್ ನಲ್ಲಿ ಇಬ್ಬರು ಸವಾರರಿದ್ದು ಮಗುವನ್ನು ಮಧ್ಯದಲ್ಲಿ ಕೂರಿಸಿಕೊಂಡು ಶಾಲೆಗೆ ಕರೆದು ಕೊಂಡು ಹೋಗುವಾಗ ರಸ್ತೆಯಲ್ಲಿ ಜಲ್ಲಿಕಲ್ಲು ಇದ್ದು ಆಕಸ್ಮಿಕವಾಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ವಾಹನ ಕೆಳಗೆ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಮಗು ಕೂಡಾ ಕೆಳಗೆ ಬಿದ್ದು, ತಲೆಗೆ ತೀವ್ರವಾಗಿ ಪೆಟ್ಟಾಗಿದೆ. ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಮಗು ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದೆ ಎಂದು ವೈದ್ಯರು ದೃಡಪಡಿಸಿದರು. ಮಗುವನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment