ಸುದ್ದಿಒನ್, ಚಿತ್ರದುರ್ಗ, ಜನವರಿ.26 : ಮನೆಯೊಂದರಲ್ಲಿ ಆಕ್ಮಸಿಕ ಅಗ್ನಿ ಅವಘಡ ಸಂಭವಿಸಿ ಬಟ್ಟೆ-ಬರೆ ಸೇರಿದಂತೆ ಅಪಾರ ಪ್ರಮಾಣದ ಗೃಹಪಯೋಗಿ ವಸ್ತುಗಳು ಸುಟ್ಟು ಕರಕಲಾದ ಘಟನೆ ಶುಕ್ರವಾರ ಸಂಜೆ ನಗರದ ಮುನ್ಸಿಪಲ್ ಕಾಲೋನಿಯಲ್ಲಿ ನಡೆದಿದೆ.
ನಗರದ ಎಸ್ ಪಿ ಕಚೇರಿಯ ಮುಂಭಾಗದ ರಸ್ತೆಯ ಕೊಲ್ಲಾಪುರದ ಶ್ರೀ ಮಹಾಲಕ್ಷ್ಮಿ ದೇವಾಲಯದ ಬಳಿ ಇರುವ ಶಿವಪ್ರಕಾಶ್ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಯುಪಿಎಸ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಕಸ್ಮಿಕ ಬೆಂಕಿ ಹೊತ್ತಿ ಕೊಂಡಿದೆ. ಮನೆಯವರೆಲ್ಲರೂ ಹಾಲು ರಾಮೇಶ್ವರ ದೇವಸ್ಥಾನಕ್ಕೆ ಹೋಗಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಈ ಘಟನೆ ಸಂಭವಿಸಿದಾಗ ಮನೆಯಲ್ಲಿ ಯಾರೂ ಇರಲಿಲ್ಲವಾದ್ದರಿಂದ ಬಾರಿ ದುರಂತ ತಪ್ಪಿದಂತಾಗಿದೆ. ನೆರೆಹೊರೆಯವರ ಗಮನಕ್ಕೆ ಬಂದ ತಕ್ಷಣವೇ ನೀರು ಹಾಕಿ ನಂದಿಸುವ ಪ್ರಯತ್ನ ಮಾಡಿ, ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದರು.
ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸಂಪೂರ್ಣ ಬೆಂಕಿ ನಂದಿಸಿದರು. ಅಷ್ಟರಲ್ಲೇ ಮನೆಯಲ್ಲಿನ ಬಹುತೇಕ ವಸ್ತುಗಳು ಸುಟ್ಟು ಹಾನಿಯಾಗಿದ್ದವು. ಬೆಂಕಿಯ ಕೆನ್ನಾಲಿಗೆಗೆ ಬಟ್ಟೆಗಳು, ಹಾಸಿಗೆ, ದವಸ-ಧಾನ್ಯಗಳು, ಗೃಹಪಯೋಗಿ ವಸ್ತುಗಳು, ಪಿಠೊಪಕರಣಗಳು ಮತ್ತು ಮಕ್ಕಳ ಪುಸ್ತಕಗಳು ನಾಶವಾಗಿದೆ.
ವಿಷಯ ತಿಳಿದು ಬಡಾವಣೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…