Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್.17 :  ಒಂದು ವರ್ಷದ ಹಿಂದೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪೋಕ್ಸೋ ಪ್ರಕರಣದ ಆರೋಪಿಗೆ ಚಿತ್ರದುರ್ಗ ಜಿಲ್ಲೆ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (ಪೋಕ್ಸೋ) 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ
ಅತ್ತಿಮಗ್ಗೆ ಗ್ರಾಮದ ತಿಮ್ಮಯ್ಯ ಎಂಬ ಆರೋಪಿಯು  ಚಾಕೊಲೇಟ್ ಕೊಡುವ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ಮಗುವನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುತ್ತಾನೆ.

ಈ ಬಗ್ಗೆ ಹೊಸದುರ್ಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೋಲೀಸ್ ಇನ್ಸ್ ಪೆಕ್ಟರ್ ಎಂ.ಡಿ.ಫೈಜುಲ್ಲಾ ಇವರು ತನಿಖೆಯನ್ನು ಪೂರೈಸಿ ಪೋಕ್ಸೋ ಕಾಯಿದೆ ಅಡಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನಂತರ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಬಿ.ಕೆ. ಕೋಮಲ ಅವರು ಆರೋಪಿಯನ್ನು ದೋಷಿ ಎಂದು ಪರಿಗಣಿಸಿ 5 ವರ್ಷ ಕಠಿಣ ಸಜೆ ಮತ್ತು ರೂ. 10,000/- ದಂಡ ವಿಧಿಸಿ ಇಂದು (ದಿನಾಂಕ 17.11.2023 ರಂದು) ತೀರ್ಪು ನೀಡಿರುತ್ತಾರೆ ಮತ್ತು ನೊಂದ ಬಾಲಕಿಗೆ ಪರಿಹಾರವಾಗಿ
ಒಟ್ಟು ರೂ. 10,000/- ನೀಡುವಂತೆ ನ್ಯಾಯಾಲಯ ಸರಕಾರಕ್ಕೆ ಆದೇಶಿಸಿದೆ.

ಪ್ರಾಸಿಕ್ಯೂಷನ್‌ ಪರವಾಗಿ ಚಿತ್ರದುರ್ಗ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಹೆಚ್.ಆರ್. ಜಗದೀಶ್ ವಾದಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment