ಚಿತ್ರದುರ್ಗ-ಆಲಮಟ್ಟಿ ಹೊಸ ರೇಲ್ವೆ ಮಾರ್ಗ ಸಮೀಕ್ಷೆ ಮಂಡಳಿಗೆ ಸಲ್ಲಿಕೆ : ಸಂಸದ ಸಂಗಣ್ಣ ಕರಡಿ

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಬೆಂಗಳೂರು ,(ಅಕ್ಟೋಬರ್ 21) : ಬೆಂಗಳೂರು ಹಾಗೂ ಸೊಲ್ಲಾಪುರ ರೈಲ್ವೆ ಮಾರ್ಗದ ಅಂತರವನ್ನು ಕಡಿಮೆಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ ರೂಪಿಸಲಾಗುತ್ತಿರುವ ಚಿತ್ರದುರ್ಗ-ಆಲಮಟ್ಟಿ ರೇಲ್ವೆ ಮಾರ್ಗದ ಇಂಜಿನಿಯರಿಂಗ್ ಹಾಗೂ ಪ್ರಾಥಮಿಕ ಸಂಚಾರ ಸಮೀಕ್ಷೆಯ ವರದಿಯನ್ನು  ನೈಋತ್ಯ ರೇಲ್ವೆ ವಲಯದ ಮುಖ್ಯ ಇಂಜಿನಿಯರ್ ಅವರು ರೇಲ್ವೆ ಮಂಡಳಿಗೆ ಸಲ್ಲಿಸಿದ್ದಾರೆ ಎಂದು ಕೊಪ್ಪಳ ಲೋಕಸಭಾ ಸದಸ್ಯ ಸಂಗಣ್ಣ ಕರಡಿ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಮತ್ತು ಸೊಲ್ಲಾಪುರ ರೈಲು ಮಾರ್ಗದಲ್ಲಿ ಬಹಳಷ್ಟು ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ 264 ಕಿ.ಮೀ.ಉದ್ದದ  ಚಿತ್ರದುರ್ಗ-ಆಲಮಟ್ಟಿ ರೇಲ್ವೆ ಮಾರ್ಗದ ಇಂಜಿನಿಯರಿಂಗ್ ಮತ್ತು ಸಮೀಕ್ಷಾ ಕಾರ್ಯವನ್ನು ನೈಋತ್ಯ ವಲಯ ವಲಯ ಕೈಗೊಂಡಿತ್ತು.ಈಗ ಸಮೀಕ್ಷೆ ಪೂರ್ಣಗೊಂಡಿದ್ದು ಪ್ರತಿ ಕಿ.ಮೀ.ರೈಲು ಮಾರ್ಗ ನಿರ್ಮಾಣಕ್ಕೆ ತಲಾ 30.11 ಕೋಟಿ ರೂ.ವೆಚ್ಚದ ಅಂದಾಜಿನ ಪ್ರಕಾರ ಒಟ್ಟು  8431.44 ಕೋಟಿ ರೂ.ಗಳ ಅಂದಾಜು ವೆಚ್ಚದೊಂದಿಗೆ ರೇಲ್ವೆ ಮಂಡಳಿಗೆ ಸಲ್ಲಿಸಲಾಗಿದೆ.

ಹೊಸ ಮಾರ್ಗವು ಚಿತ್ರದುರ್ಗ, ವಿಜಯನಗರ,ಕೊಪ್ಪಳ ,ಬಾಗಲಕೋಟ ಮತ್ತು ವಿಜಯಪುರ ಜಿಲ್ಲೆಗಳ ಪ್ರಮುಖ ಸ್ಥಳಗಳಾದ ಹೊಸಹಳ್ಳಿ, ಕೂಡ್ಲಿಗಿ, ಕೊಪ್ಪಳ,ಕುಷ್ಟಗಿ,ಹುನಗುಂದ ಹಾಗೂ ಕೂಡಲಸಂಗಮ ಮೂಲಕ ಹಾಯ್ದು ಹೋಗಲಿದೆ.ಪ್ರಸ್ತುತ ಇರುವ 13.5 ಕಿ.ಮೀ.ಮಾರ್ಗವನ್ನೂ ಕೂಡ ಬಳಸಿಕೊಳ್ಳಲಿದೆ.

1397 ಹೆಕ್ಟೇರ್ ಒಣಭೂಮಿ, 644.88 ಹೆಕ್ಟೇರ್ ನೀರಾವರಿ ಮತ್ತು 107.48 ಹೆಕ್ಟೇರ್ ನಗರ ಪ್ರದೇಶದ ಭೂಮಿ ಸೇರಿ ಒಟ್ಟು 2149.36 ಹೆಕ್ಟೇರ್ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕಾಗುತ್ತದೆ.

ಕೇಂದ್ರ ಸಚಿವರು ಹಾಗೂ ಸಂಸದರ ಭರವಸೆ : ಬಹುನಿರೀಕ್ಷಿತ ಚಿತ್ರದುರ್ಗ-ಆಲಮಟ್ಟಿ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರದಿಂದ  ಅಗತ್ಯ ನೆರವು ಸಿಗುವ ಭರವಸೆಯನ್ನು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಸಂಸದರಾದ ವೈ.ದೇವೇಂದ್ರಪ್ಪ, ಪಿ.ಸಿ.ಗದ್ದಿಗೌಡರ,ರಮೇಶ ಜಿಗಜಿಣಗಿ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನರ ಮಹತ್ವದ ಬೇಡಿಕೆಯಾಗಿರುವ ಈ ರೈಲು ಮಾರ್ಗ ನಿರ್ಮಾಣದಿಂದ ಸಾರಿಗೆ, ಸಂಪರ್ಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆಯಾಗಲಿದೆ. ಮುಂಬರುವ ಕೇಂದ್ರ ಬಜೆಟ್‌ನಲ್ಲಿ  ಅಗತ್ಯ ಅನುದಾನ ಲಭ್ಯವಾಗಲಿ ಎಂಬುದು ಈ ಭಾಗದ ಜನರ ಆಶಯವಾಗಿದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

48 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago