ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 28 : ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಜ.18 ಮತ್ತು 19 ರಂದು ನಡೆಯುವ ಅಖಿಲ ಭಾರತ 13 ನೇ ಶರಣ ಸಾಹಿತ್ಯ ಸಮ್ಮೇಳನದ ಪೋಸ್ಟರ್‍ನ್ನು ರಾಷ್ಟ್ರೀಯ ಹೆದ್ದಾರಿ-13 ರಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್, ಕೆ.ಇ.ಬಿ.ಷಣ್ಮುಖಪ್ಪ, ಚಿತ್ರಕಲಾವಿದ ನಾಗರಾಜ್‍ಬೇದ್ರೆ, ಕೆ.ಪಿ.ಎಂ.ಗಣೇಶಯ್ಯ, ಕದಳಿ ವೇದಿಕೆ ಜಿಲ್ಲಾಧ್ಯಕ್ಷೆ ಪ್ರೊ.ಜಯಲಕ್ಷ್ಮಿ, ಪ್ರಧಾನ ಕಾರ್ಯದರ್ಶಿ ಶೋಭ ಮಲ್ಲಿಕಾರ್ಜುನ್, ಕಾರ್ಯದರ್ಶಿ ಡಾ.ಮಂಜುಳ, ಲೋಕೇಶ್ ಬಿ. ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.












