ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 27 : ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಳೆಕಟ್ಟೆ ಗ್ರಾಮ ಬಳಿ ಈ ಘಟನೆ ನಡೆದಿದೆ.
ಹಾವೇರಿಯ ಶಿವಬಸವ (50) ಎಂಬುವವರು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ
ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹಾವೇರಿಗೆ ಖಾಸಗಿ ಆಂಬುಲೆನ್ಸ್ ನಲ್ಲಿ ಶಿವಬಸವ ಅವರ ಮೃತದೇಹವನ್ನು ಸಾಗಿಸುತ್ತಿದ್ದ ವೇಳೆ ಮೃತರ ಸಂಬಂಧಿ ಸರೋಜಮ್ಮ (52 ವರ್ಷ) ಎಂಬ ಮಹಿಳೆ ಅಪಘಾತದ ವೇಳೆ ಸಾವನ್ನಪ್ಪಿದ್ದಾರೆ. ಆಂಬುಲೆನ್ಸ್ ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








