ಸುದ್ದಿಒನ್, ಚಿತ್ರದುರ್ಗ, ಜನವರಿ. 17 : ನಗರದ ಜೆಸಿಆರ್ ಬಡಾವಣೆಯ ನಿವಾಸಿ ಹಾಗೂ ದಿವಂಗತ ಡಾ. ಹೇಮರೆಡ್ಡಿ (ಡಿಎಚ್‌ಒ ಹಾಗೂ ಮಾಜಿ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ) ಇವರ ಧರ್ಮಪತ್ನಿ ಅನುಸೂಯ (77 ವರ್ಷ) ಇಂದು (ಜನವರಿ. 17) ಬೆಳಿಗ್ಗೆ ನಿಧನರಾದರು.
ಮೃತರು ಮೂವರು ಪುತ್ರರು, ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು ಸಂಜೆ 5 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.










