ಗಣರಾಜ್ಯೋತ್ಸವ ಸಮೀಪಿಸುತ್ತಿದೆ. ದೆಹಲಿಯಲ್ಲಿ ಅದ್ದೂರಿಯಾಗಿ ನಡೆಯುವ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಜ್ಯದಿಂದಾನೂ ಹಲವರು ಅತಿಥಿಗಳಾಗಿ ಹೋಗುತ್ತಾರೆ. ಜೊತೆಗೆ ರಾಜ್ಯದ ಸ್ತಬ್ಧ ಚಿತ್ರಗಳ ಪ್ರದರ್ಶನ ಕೂಡ ಇರಲಿದೆ. ಈ ಬಾರಿ ಗ್ರಾಮ ಪಂಚಾಯತಿಯಿಂದಾನೂ ಅತಿಥಿಗಳನ್ನ ಆಹ್ವಾನ ಮಾಡಿದ್ದಾರೆ. ದೇಶದಾದ್ಯಂತ ಒಟ್ಟು 750 ಸ್ಥಳೀಯ ಆಡಳಿತ ಪ್ರತಿನಿಧಿಗಳನ್ನ ಆಯ್ಕೆ ಮಾಡಿ, ಆಹ್ವಾನ ಮಾಡಿದ್ದಾರೆ. ಅದರಲ್ಲಿ ಕರ್ನಾಟಕದಿಂದ 12 ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಆಹ್ವಾನ ಸಿಕ್ಕಿದೆ. ಚಿತ್ರದುರ್ಗ ಜಿಲ್ಲೆಯಿಂದಾನೂ ಆಯ್ಕೆಯಾಗಿರುವುದು ಸಂತಸ ತಂದಿದೆ.
ಕರ್ನಾಟಕದಿಂದ ಹಾವೇರಿ, ಮೈಸೂರು, ಹಾಸನ, ಮಂಡ್ಯ, ಕೊಡಗು, ಚಿತ್ರದುರ್ಗ, ಗದಗ ಜಿಲ್ಲೆ ಸೇರಿದಂತೆ 12 ಗ್ರಾಮ ಪಂಚಾಯತ್ ಅಧ್ಯಕ್ಷರು ದೆಹಲಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆಗೆ ಅವರ ಪತಿ ಅಥವಾ ಪತ್ನಿಯನ್ನು ಕರೆದುಕೊಂಡು ಹೋಗುವ ಅವಕಾಶವಿದೆ. ಈ ಬಾರಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವೀಕ್ಷಿಸುವ ಸೌಭಾಗ್ಯವನ್ನು ಪಡೆದುಕೊಂಡಿದ್ದಾರೆ.
ಈಗಾಗಲೇ ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕರು, ಆಯ್ಕೆಯಾಗಿರುವ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಪತ್ರ ಬರೆದಿದ್ದು, ಗ್ರಾಮ ಪಂಚಾಯತ್ ಕಾರ್ಯಕ್ರಮಕ್ಕೆ ಹೋಗುವ ಅದ್ಯಕ್ಷರು ಹಾಗೂ ಅವರ ಜೊತೆಗೆ ಹೋಗುವ ಕುಟುಂಬದ ಒಬ್ಬರಿಗೆ ಅಲ್ಲಿ ಇರುವುದಕ್ಕೆ, ಊಟ ತಿಂಡಿ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡುವಂತೆ ಪತ್ರ ಬರೆದಿದ್ದಾರೆ. ಈ ಬಾರಿಯ ಗಣರಾಜ್ಯೋತ್ಸವವನ್ನು ಆಯ್ಕೆಯಾದ ಗ್ರಾಮ ಪಂಚಾಯತ್ ಅಧ್ಯಕ್ಷರುಗಳು ಹತ್ತಿರದಿಂದ ಕಣ್ತುಂಬಿಕೊಳ್ಳಲಿದ್ದಾರೆ. ದೆಹಲಿಗೆ ಹೊರಡಲು ಅವರು ಕೂಡ ಉತ್ಸುಕರಾಗಿದ್ದಾರೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಗದರಾಮ ಪಂಚಾಯತಿ ಮಟ್ಟದಿಂದಾನೂ ಈ ಬಾರಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.
