ಚಿತ್ರದುರ್ಗ. ನ.15: ಚಿತ್ರದುರ್ಗ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಮತ್ತು ಇತರೆ ಎಲ್ಲಾ ತರಹದ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆಗಳನ್ನು ನೀಡಲು ಒಬ್ಬ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ಹಿರಿಯ ಸಿವಿಲ್ ನ್ಯಾಯಾಧೀಶರನ್ನು ಗುತ್ತಿಗೆ ಆಧಾರದಲ್ಲಿ ಮಾಸಿಕ ಸಂಚಿತ ವೇತನ ನೀಡುವ ಷರತ್ತಿಗೆ ಒಳಪಡಿಸಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 29 ಅರ್ಜಿ ಸಲ್ಲಿಸಲು ಕೊನೆಯ ದಿನ.
ಆಸಕ್ತ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ಹಿರಿಯ ಸಿವಿಲ್ ನ್ಯಾಯಾಧೀಶರು ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇಲ್ಲಿ ಕೆಲಸದ ಸಮಯದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











