ಚಿತ್ರದುರ್ಗ | ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

1 Min Read

 

ಚಿತ್ರದುರ್ಗ ಅ. 25 :‌ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವವರನ್ನು ಆಯ್ಕೆ ಮಾಡಿ, ಜಿಲ್ಲಾ ಮಟ್ಟದಲ್ಲಿ ನ. 01 ರಂದು ಜರುಗುವ ರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಸನ್ಮಾನಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾಹಿತ್ಯ, ಸಂಗೀತ, ಕಲೆ (ರಂಗಭೂಮಿ), ಜಾನಪದ, ಸಮಾಜ ಸೇವೆ, ಪರಿಸರ ಸಂರಕ್ಷಣೆ, ಕೃಷಿ, ಕ್ರೀಡೆ, ವಿಜ್ಞಾನ ತಂತ್ರಜ್ಞಾನ ಸಂಶೋಧನೆ, ವೈದ್ಯಕೀಯ, ವಿಶೇಷಚೇತನರ ಕ್ರೀಡೆ, ಚಿತ್ರಕಲೆ ಕ್ಷೇತ್ರಗಳಲ್ಲಿ ಉತ್ತಮ ಹಾಗೂ ಗಣನೀಯ ಸೇವೆ, ಸಾಧನೆಗೈದವರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಆಸಕ್ತರು ತಮ್ಮ ಹೆಸರು, ವಿಳಾಸ, ತಾವು ಸಾಧನೆ ಮಾಡಿರುವ ಕ್ಷೇತ್ರ, ಇದಕ್ಕೆ ಪೂರಕವಾಗಿರುವ ಛಾಯಾಚಿತ್ರಗಳು, ಪತ್ರಿಕಾ ವರದಿಗಳು, ಪ್ರಶಸ್ತಿಗಳು ಮುಂತಾದ ವಿವರಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತ.ರಾ.ಸು. ರಂಗಮಂದಿರ ಆವರಣ, ಚಿತ್ರದುರ್ಗ ಇವರಿಗೆ ಅ. 30 ರಂದು ಮಧ್ಯಾಹ್ನ 12.30 ರ ಒಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *