Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ, 300 ಗ್ರಾಂ ಗಾಂಜಾ ವಶ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.12 :  ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ (Ganja) ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಅಬಕಾರಿ ಅಧಿಕಾರಿಗಳು 300 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಗುರುನಾಥ ಮತ್ತು ಭರತ ಬಂಧಿತ ಆರೋಪಿಗಳು.
ಅಬಕಾರಿ ಇಲಾಖೆಗೆ ಬಂದ ಖಚಿತ ಮಾಹಿತಿ ಮೇರೆಗೆ ಅಕ್ಟೋಬರ್ 10 ರಂದು ಹಿರಿಯೂರು ನಗರದ ಗಾರೆದಿಂಡು ರಸ್ತೆಯಲ್ಲಿ ಅಬಕಾರಿ ದಾಳಿ ಮಾಡಿ ಇವರಿಬ್ಬರನ್ನೂ
ತಪಾಸಣೆ ನಡೆಸಿದ ವೇಳೆ ತೆನೆ, ಬೀಜಗಳಿಂದ ಕೂಡಿದ ಒಣ ಗಾಂಜಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ
ಸಿಕ್ಕಿ ಬಿದ್ದಿದ್ದು, ಗಾಂಜಾವನ್ನು ವಶಕ್ಕೆ ಪಡೆದು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಅಬಕಾರಿ ಡಿವೈಎಸ್‌ಪಿ ನಾಗರಾಜ್ ತಿಳಿಸಿದ್ದಾರೆ.

ಚಿತ್ರದುರ್ಗ ಉಪ ಆಯುಕ್ತರಾದ ವನಿತಾ. ಎ. ರವರ ಮಾರ್ಗದರ್ಶನದಲ್ಲಿ ಅಬಕಾರಿ ಪೇದೆ ರಾಮಾಂಜನೇಯ, ಮತ್ತು ವಾಹನ ಚಾಲಕ ನಾಗರಾಜ ಕಲ್ಲಪ್ಪ ತೋಳಮಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment