ಸುದ್ದಿಒನ್, ಚಿತ್ರದುರ್ಗ, (ಜೂ.13) : ಚಿತ್ರದುರ್ಗ ಆರ್ಯವೈಶ್ಯ ಸಂಘವು ಹಲವಾರು ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಹೆಸರಾಗಿದೆ. ಇದೀಗ ನಿತ್ಯ ಅನ್ನ ಪ್ರಸಾದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಅನ್ನಂ ಬ್ರಹ್ಮಮಯಂ ಜಗತ್ ಎಂಬ ಮಾತಿಗೆ ಅನುಗುಣವಾಗಿ ಶ್ರೀ ಕನ್ಯಕಾಪರಮೇಶ್ವರಿ ದೇವಿ ಹಾಗೂ ಮಾತಾ ಅನ್ನಪೂರ್ಣೇಶ್ವರಿಯ ಅನುಗ್ರಹ ಹಾಗೂ ವಾಸವಿ ಪೀಠಾಧಿಪತಿಗಳಾದ ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರ ಅನುಗ್ರಹದೊಂದಿಗೆ ವಾಸವಿ ದೇವಿಯ ಪೂಜಾ ಕೈಂಕರ್ಯದೊಂದಿಗೆ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.
ನಗರದ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆರ್ಯವೈಶ್ಯ ಸಂಘದ ಅಧ್ಯಕ್ಷರಾದ ಎಲ್.ಇ. ಶ್ರೀನಿವಾಸಬಾಬುರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಳೆದ 50 ದಿನಗಳವರೆಗೆ ಸತತವಾಗಿ ಮಧ್ಯಾಹ್ನ 12.00 ಗಂಟೆಗೆ ದೇವಾಲಯದ ಮುಂದೆ ಮಜ್ಜಿಗೆ ವಿತರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
ಜೊತೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರಗಳಂದು ಅನ್ನ ಪ್ರಸಾದ ವಿತರಣೆಯನ್ನು ಏರ್ಪಡಿಸಲಾಗಿದ್ದು ಇದರ ಪ್ರಯೋಜನವನ್ನು ಪ್ರತಿ ದಿನ 500ಕ್ಕೂ ಹೆಚ್ಚಿನ ಜನ ಪಡೆದಿದ್ದಾರೆ.
ಈ ಕಾರ್ಯಕ್ರಮಗಳನ್ನು ಪ್ರತಿ ದಿನವೂ ನಡೆಸಬೇಕೆಂಬ ಸದಾಶಯದೊಂದಿಗೆ ಪ್ರತಿದಿನ ಅನ್ನಪ್ರಸಾದ ವಿತರಣೆ ಕಾರ್ಯಕ್ರಮ ಉದ್ಘಾಟನೆಯನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಆರ್ಯ ವೈಶ್ಯ ಸಂಘದ ಪದಾಧಿಕಾರಿಗಳು, ಸಮುದಾಯದ ಮುಖಂಡರು, ಭಕ್ತರು, ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.
ಮಾಹಿತಿ ಮತ್ತು ಫೋಟೋ ಕೃಪೆ
ಟಿ.ವಿ. ಸುರೇಶಗುಪ್ತ, ಸಾರ್ವಜನಿಕ ಸಂಪರ್ಕಾಧಿಕಾರಿಗಳು, ಆರ್ಯವೈಶ್ಯ ಸಂಘ, ಚಿತ್ರದುರ್ಗ,