Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ: 2.68 ಲಕ್ಷಕ್ಕೂ ಅಧಿಕ ಮತದಾರರ ಗಣತಿ ನಮೂನೆ ವಿತರಣೆ

---Advertisement---

 

 

ಚಿತ್ರದುರ್ಗ. ಜುಲೈ10: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ಬಿರುಸಿನಿಂದ ಮನೆ-ಮನೆ ಸಮೀಕ್ಷೆ ನಡೆಯುತ್ತಿದ್ದು, ಜುಲೈ 10ರವರೆಗೆ ಒಟ್ಟು 2,68,570 ಗಣತಿ ನಮೂನೆಗಳನ್ನು ವಿತರಿಸಲಾಗಿದೆ.

 

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 30ರಿಂದಲೇ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 288 ಮತಗಟ್ಟೆಗಳಿದ್ದು, ಒಟ್ಟು 2,69,332 ಮತದಾರರಿದ್ದಾರೆ. ಈ ಪೈಕಿ ಸದ್ಯ ವಿತರಿಸಲಾಗಿರುವ ಗಣತಿ ನಮೂನೆಗಳಲ್ಲಿ 72,303 ಗಣತಿ ನಮೂನೆಗಳನ್ನು ಈಗಾಗಲೇ ಗಣಕೀಕರಣ ಮಾಡಲಾಗಿದೆ.

 

ಈ ಮನೆ-ಮನೆ ಪರಿಶೀಲನಾ ಕಾರ್ಯದಲ್ಲಿ ಜುಲೈ 10ರವರೆಗೆ ಲಭ್ಯವಾಗಿರುವ ಮಾಹಿತಿಯ ಅನ್ವಯ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಶಾಶ್ವತವಾಗಿ ವಲಸೆ ಹೋಗಿರುವ 173 ಜನರನ್ನು ಪತ್ತೆ ಹಚ್ಚಲಾಗಿದೆ. ಉಳಿದಂತೆ ಮರಣ ಹೊಂದಿರುವ 236 ಮತದಾರರು, ಎರಡು ಕಡೆ ಹೆಸರು ದಾಖಲಾಗಿರುವ (ಡಬಲ್ ಎಂಟ್ರಿ) 53 ಪ್ರಕರಣಗಳು ಹಾಗೂ ಗೈರುಹಾಜರಾಗಿರುವ 9 ಜನರನ್ನು ಗುರುತಿಸಿ ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮನೆ-ಮನೆ ಭೇಟಿಯ ಈ ಪ್ರಕ್ರಿಯೆಯು ಜುಲೈ 29ರವರೆಗೆ ನಡೆಯಲಿದೆ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದ್ದಾರೆ.
==============

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now