Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನ. 26 ರಂದು ನ್ಯಾಯಾಲಯದಲ್ಲಿ ವಾಹನಗಳ ಹರಾಜು ಪ್ರಕ್ರಿಯೆ…!

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 15 : ನಗರದ 2 ನೇ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳ ಹರಾಜು ಪ್ರಕ್ರಿಯೆಯನ್ನು ಇದೇ ನವೆಂಬರ್ 26 ರಂದು ಬೆಳಿಗ್ಗೆ 10:30 ಗಂಟೆಗೆ ನಡೆಸಲಾಗುವುದು ಎಂದು 2 ನೇ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.

ಅಂದು ನ್ಯಾಯಾಲಯದ ಆವರಣದಲ್ಲಿ 6 ದ್ವಿಚಕ್ರ ವಾಹನಗಳು, ಒಂದು ಕೀ ಪ್ಯಾಡ್ ಮೊಬೈಲ್, ಒಂದು ಯುಪಿಎಸ್, ಒಂದು ಬಜಾಜ್ ಮ್ಯಾಕ್ಸ್ 100 ವಾಹನ ಮತ್ತು ಒಂದು ಗುಜ್ಜಾರ್ ನರ್ಮಾದಾ, ವಾಹನಗಳನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ನ್ಯಾಯಾಧೀಶರು ಆದೇಶಿದ್ದಾರೆ.

ಸಾರ್ವಜನಿಕರು ಹರಾಜಿನಲ್ಲಿ ಭಾಗವಹಿಸಲು ಈ ಕೆಳಕಂಡ ಷರತ್ತುಗಳು ಅನ್ವಯಿಸುತ್ತದೆ.

1. ಹರಾಜಿನಲ್ಲಿ ಹೆಚ್ಚಿನ ಹಣಕ್ಕೆ ಬಿಡ್ ಮಾಡಿದವರಿಗೆ ಮುದ್ದೆಮಾಲು ಕೊಡಲಾಗುವುದು.

2. ಹರಾಜಿನ ಹಣವನ್ನು ಅಂದೇ ಆ ಕೂಡಲೇ ನ್ಯಾಯಾಲಯದಲ್ಲಿ, ಪಾವತಿ ಮಾಡಿ ರಶೀದಿಯನ್ನು ಪಡೆಯತಕ್ಕದ್ದು.

3. ಹರಾಜಿನ ಅಂತಿಮ ತೀರ್ಮಾನ ನ್ಯಾಯಾಲಯದ ವಿವೇಚನೆಗೆ ಒಳಪಟ್ಟಿರುತ್ತದೆ.

4. ನ್ಯಾಯಾಲಯಕ್ಕೆ ಸೂಕ್ತವಾದ ಯೋಗ್ಯ ಬೆಲೆ ಬಾರದಿದ್ದಲ್ಲಿ ಹರಾಜನ್ನು ಮುಂದೂಡಲಾಗುವುದು ಎಂದು ನ್ಯಾಯಾಲಯದ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...