ಸುದ್ದಿಒನ್, ಚಿತ್ರದುರ್ಗ, ಜೂನ್. 20 : ವಿದ್ಯಾನಗರ ನಿವಾಸಿ ಬನ್ನಿಕಲ್ ಮಠದ ಕೊಟ್ರಬಸಯ್ಯ(94 ವರ್ಷ) ಶನಿವಾರ ಮುಂಜಾನೆ ನಿಧನಹೊಂದಿದರು. ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ನಗರದ ಜೋಗಿಮಟ್ಟಿ ರಸ್ತೆಯ ವೀರಶೈವ ರುದ್ರಭೂಮಿಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.








