ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 13 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ರವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ವೃತ್ತಿಪರ ವಿಭಾಗದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಚಳ್ಳಕೆರೆ ವಿಠಲ್ ನಗರದ ವಾಸಿ ಬಿ.ಎ.ಪರಮೇಶ್ವರಪ್ಪ ಇವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬಿ.ಎ.ಪರಮೇಶ್ವರಪ್ಪನವರಿಗೆ ನೇಮಕ ಪತ್ರ ವಿತರಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಪಡೆದುಕೊಂಡು ಮನೆಯಲ್ಲಿ ಕುಳಿತುಕೊಂಡರೆ ಪ್ರಯೋಜನವಿಲ್ಲ. ಜಿಲ್ಲೆಯಾದ್ಯಂತ ಸಂಚರಿಸಿ ವೃತ್ತಿಪರ ವಿಭಾಗವನ್ನು ಸಂಘಟಿಸಿ ಪಕ್ಷಕ್ಕೆ ಶಕ್ತಿ ತುಂಬುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಸೂಚಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ವೃತ್ತಿಪರ ವಿಭಾಗದ ಅಧ್ಯಕ್ಷ ಮಹಡಿ ಶಿವಮೂರ್ತಿ, ಅಬ್ದುಲ್ಲಾ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಮುದಾಸಿರ್‍ನವಾಜ್, ಸೈಯದ್ ಸೈಫುಲ್ಲಾ, ಎಸ್ಸಿ.ಘಟಕದ ಜಿಲ್ಲಾ ಕಾರ್ಯದರ್ಶಿ ದೇವರಾಜ್ ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















