ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಏಪ್ರಿಲ್.24 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಜಿಲ್ಲಾ ಬಂಜಾರ ಸಮಾಜದಿಂದ ಬುಧವಾರ ಜಿಲ್ಲೆಯ ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕಿನ ತಾಂಡಾಗಳಲ್ಲಿ ಮತ ಯಾಚಿಸಲಾಯಿತು.
ಕಾಂಗ್ರೆಸ್ ಸರ್ಕಾರ ಹಿಂದಿನಿಂದಲೂ ಬಂಜಾರ ಸಮಾಜವನ್ನು ನಿರ್ಲಕ್ಷಿಸುತ್ತಲೆ ಬರುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಎಲ್ಲಿಯೂ ಲಂಬಾಣಿ ಜನಾಂಗದವರ ಸ್ಪರ್ಧೆಗೆ ಅವಕಾಶ ಕೊಟ್ಟಿಲ್ಲ. ಶಾಸಕ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡದೆ ವಂಚಿಸುತ್ತಿದೆ.
ಹಾಗಾಗಿ ಸಂವಿಧಾನದ ಪರವಾಗಿರುವ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಿ ಲೋಕಸಭೆಗೆ ಕಳಿಸಿಕೊಡುವಂತೆ ತಾಂಡಾಗಳಲ್ಲಿನ ಲಂಬಾಣಿ ಜನಾಂಗದವರಲ್ಲಿ ಡಾ.ಜಯಸಿಂಹ ಲೋಕನಾಥ್ ಹಾಗೂ ಜಿಲ್ಲಾ ಬಂಜಾರ ಸಮಾಜದ ಅಧ್ಯಕ್ಷ ಎಂ.ಸತೀಶ್‍ಕುಮಾರ್ ಇವರುಗಳು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ, ಶಂಕರ್‍ನಾಯ್ಕ, ಪರಮೇಶ್‍ನಾಯ್ಕ ಇನ್ನು ಅನೇಕರು ಮತಯಾಚನೆಯಲ್ಲಿ ತೊಡಗಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್