Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ: ಮಳೆ ಎಲ್ಲೆಲ್ಲಾ ಆಗಲಿದೆ..? ಹವಮಾನ ಇಲಾಖೆ ವರದಿ ಏನು..?

---Advertisement---

ಮಳೆ ನಿಲ್ತಪ್ಪ.. ಕೊಯ್ಲು ಮಾಡಬಹುದಪ್ಪ ಎಂದುಕೊಂಡ ರೈತ, ಕೂಲಿಯಾಳುಗಳು, ಯಂತ್ರಗಳ ಬುಕ್ಕಿಂಗ್ ಮಾಡಿಕೊಳ್ಳುತ್ತಿರುವಾಗಲೇ ಮಂಕಾಗುವಂತೆ ಅಪ್ಪಳಿಸಿದ್ದು ಫೆಂಗಲ್ ಚಂಡಮಾರುತ. ಈ ಫೆಂಗಲ್ ಸೈಕ್ಲೋನ್ ನಿಂದಾಗಿ ತಮಿಳುನಾಡಿ, ಆಂಧ್ರಪ್ರದೇಶ, ಕೇರಳ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗಿತ್ತು. ಇದರ ಪರಿಣಾಮ ಕರ್ನಾಟಕದ ಮೇಲೂ ಬಿದ್ದಿದೆ. ಹೀಗಾಗಿ ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗದಲ್ಲಿ ಮಳೆ ಸುರಿಯುತ್ತಲೆ ಇದೆ. ಇದು ರೈತರ ಬೆಳೆ‌ ಮೇಲೆ ಪರಿಣಾಮ ಬೀರಿದೆ.

ಇಂದು ಕೂಡ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಅದರಲ್ಲೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ ಭಾಗದಲ್ಲಿ ಮಳೆ ಬೀಳಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಅಷ್ಟೇ ಅಲ್ಲ ಕೊಡಗು, ಹಾಸನ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕಲಬುರಗಿ, ಬೆಳಗಾವಿ, ರಾಯಚೂರು, ಬೀದರ್, ಧಾರವಾಡ, ಕೊಪ್ಪಳ, ಹಾವೇರಿ, ಗದಗ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ‌ ನೀಡಿದೆ. ಫೆಂಗಲ್ ಚಂಡಮಾರುತದ ಪರಿಣಾಮದಿಂದಾಗಿ ಕಳೆದ ಮೂರ್ನಾಲ್ಕು ದಿನದಿಂದ ರಾಜ್ಯದಲ್ಲಿ ಜಿಟಿಜಿಟಿ ಮಳೆಯಾಗುತ್ತಿತ್ತು. ನಿನ್ನೆಯಿಂದ ಕೊಂಚ ವಿಶ್ರಾಂತಿ ನೀಡಿದ್ದ ಮಳೆರಾಯ ಇಂದು ಮತ್ತೆ ಮಳೆಯ ಸೂಚನೆ ನೀಡಿದೆ. ಬೆಂಗಳೂರಿನ ಹಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇದೇ ರೀತಿ ಮಳೆಯಾಗುತ್ತಿದ್ದರೆ ರೈತರ ಬೆಳೆಗೆ ನಿರೀಕ್ಷಿಸಿದ ಲಾಭ ಬರುವುದಕ್ಕೆ ಸಾಧ್ಯವಾಗುವುದಿಲ್ಲ. ಅದರಲ್ಲೂ ಈಗ ರಾಗಿ ಬೆಳೆಯದ್ದೇ ಎಲ್ಲರಿಗೂ ಚಿಂತೆಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...