ಚಿತ್ರದುರ್ಗ | ಲಾರಿಗೆ ಬೈಕ್ ಡಿಕ್ಕಿ : ಓರ್ವ ಸಾವು…!

suddionenews
1 Min Read

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಿತ್ರದುರ್ಗ, ಜೂನ್.22 :  ಚಲಿಸುತ್ತಿದ್ದ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮವಾಗಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಜೆಲ್ಲೆಯ ಹೊಳಲ್ಕೆರೆ ತಾಲೂಕಿನ ಮುತ್ತುಗದೂರು ಮತ್ತು ಚಿಕ್ಕಜಾಜೂರು ರೈಲು ನಿಲ್ದಾಣಗಳ ಮಧ್ಯೆ  ಇಂದು ಸಂಜೆ ಸುಮಾರು 4 ಗಂಟೆಗೆ ಈ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಮುತ್ತುಗದೂರು ಗ್ರಾಮದ ವಾಗೇಶ್(65) ಎಂದು ಗುರುತಿಸಲಾಗಿದೆ.

ತೋಟದ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ  ವೇಳೆ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಚಿಕ್ಕಜಾಜೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *