ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.14 : ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೀಬಾರ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4 ರ ಸೀಬಾರದಿಂದ ಹೊಸ ಹೈವೆಗೆ ಹೋಗುವ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಮೃತ ವ್ಯಕ್ತಿ ಇನ್ನೂ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಬೈಕ್ ಗೆ ಡಿಕ್ಕಿ ಹೊಡೆದು ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಲಾರಿ ಮತ್ತು ಚಾಲಕನ ಪತ್ತೆಗೆ ಕ್ರಮಕೈಗೊಂಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











