ಚಿತ್ರದುರ್ಗ | ಮಾ.02 ರಂದು ಬಿಜೆಪಿ ಪದಾಧಿಕಾರಿಗಳ ಕಾರ್ಯಾಗಾರ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 27 : ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ, ಚಿತ್ರದುರ್ಗ ನಗರ ಮತ್ತು ಗ್ರಾಮಾಂತರ ಮಂಡಲದ ಬಿಜೆಪಿ ಪಕ್ಷದ ಪದಾಧಿಕಾರಿಗಳ ಕಾರ್ಯಾಗಾರ ಸಭೆಯನ್ನು ಮಾ.2ರ ಸೋಮವಾರ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ನಗರಾಧ್ಯಕ್ಷ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ನಾಗರಾಜ್ ತಿಳಿಸಿದ್ದಾರೆ.

 

ಈ ಸಭೆಗೆ ಮಾಜಿ ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ, ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಪ್ರಧಾನಕಾರ್ಯದರ್ಶಿ ಪ್ರೀತಮ್‍ಗೌಡ, ವಿಧಾನಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಚಿದಾನಂದಗೌಡ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಕೆ.ಟಿ. ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು-ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

 

ಈ ಸಭೆಗೆ ಬೂತ್ ಕಮಿಟಿ ಅಧ್ಯಕ್ಷರು, ಶಕ್ತಿ ಕೇಂದ್ರ ಮತ್ತು ಮಹಾಶಕ್ತಿಕೇಂದ್ರದ ಪ್ರಮುಖರು ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಪಕ್ಷದ ಮುಖಂಡರು-ಕಾರ್ಯಕರ್ತರು, ಪಕ್ಷದ ಹಿತೈಷಿಗಳು-ಬೆಂಬಲಿಗರು ಭಾಗವಹಿಸಿ. ಃಐಂ2 ಮತ್ತು ಪದಾಧಿಕಾರಿಗಳ ಕಾರ್ಯಾಗಾರ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲು ಕೋರಿದ್ದಾರೆ.

Share This Article
Enable Notifications OK No thanks