Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಏಪ್ರಿಲ್ 05 ರಂದು ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,                                                            ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಏ.04 : ರಾಜ್ಯ ವ್ಯಾಪ್ತಿ ಬಿಜೆಪಿ ಕರೆ ಕೊಟ್ಟಿರುವ ಹಿನ್ನಲೆಯಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ದ ಬಿಜೆಪಿ ಜಿಲ್ಲಾ ಘಟಕದವತಿಯಿಂದ ಪ್ರತಿಭಟನೆಯನ್ನು ಏ. 5ರ ಶನಿವಾರ ಬೆಳಿಗ್ಗೆ 11ಕ್ಕೆ ಚಿತ್ರದುರ್ಗದ ಓನಕೆ ಒಬವ್ವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಎ.ಮುರಳಿ ತಿಳಿಸಿದ್ದಾರೆ.

 

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಂದಾಗಿನಿಂದ ಬೆಲೆ ಏರಿಕೆ ನಿರಂತರವಾಗಿದೆ. ಪೆಟ್ರೋಲ್ ಡೀಸೆಲ್, ಸ್ಟಾಂಪ್ ಶುಲ್ಕ, ಹಾಲಿನ ದರ, ಮೆಟ್ರೋದರ ನೀರಿನ ತೆರಿಗೆ ವಿದ್ಯುತ್ ದರ ಬಸ್ ಪ್ರಯಾಣ ದರ ಹೆಚ್ಚಳ ಮಾಡಿ ಬಡವರಿಗೆ ಬರೆ ಎಳೆಯುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ದ ಬಿಜೆಪಿ ಜಿಲ್ಲಾ ಘಟಕದವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

 

ಈ ಪ್ರತಿಭಟನೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು, ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ನೇರ‍್ಲುಗುಂಟೆ ತಿಪ್ಪೇಸ್ವಾಮಿ, ಎಸ್.ಕೆ.ಬಸವರಾಜನ್, ಬಿಜೆಪಿ ಮುಖಂಡರಾದ ಎಸ್.ಲಿಂಗಮೂರ್ತಿ, ಎನ್.ಆರ್.ಲಕ್ಷ್ಮೀಕಾಂತ ಸೇರಿದಂತೆ ಬಿಜೆಪಿಯ ಎಲ್ಲಾ ಮಂಡಲ ಹಾಗೂ ಜಿಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು, ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷರಾದ ಮುರಳಿ ತಿಳಿಸಿದ್ದಾರೆ.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment