ಚಿತ್ರದುರ್ಗ : ನಗರದ ಜೋಗಿಮಟ್ಟಿ ಗೆಳೆಯರ ಬಳಗದ ಅಧ್ಯಕ್ಷ ಸಂತೋಷ್ ಕುಮಾರ್ ( 39 ) ಹೃದಯಾಘಾತದಿಂದ ನಿಧನರಾಗಿದ್ದಾರೆ.

ನೇತ್ರ ದಾನ ಮಾಡುವ ಮೂಲಕ ಸಂತೋಷ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ನವರು ನೇತ್ರ ಪಡೆದು ಪ್ರಮಾಣ ಪತ್ರ ನೀಡಿದರು.

ರಾಷ್ಟೀಯ ಸ್ವಯಂ ಸೇವಾ ಸಂಘದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪ್ರಸ್ತುತ ಚಿತ್ರದುರ್ಗ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿದ್ದರು.

ಮೃತರಿಗೆ ತಾಯಿ ರಾಧ, ತಂಗಿ ಪವಿತ್ರಾ ಬಸವರಾಜ್, ತಮ್ಮ ನವೀನ್, ಶ್ರೀಮತಿ ಕೃಷ್ಣವೇಣಿ ಮಗಳು ಇಂಪನ ಸೇರಿದಂತೆ ಅನೇಕ ಬಂಧು ಬಳಗವನ್ನು ಅಗಲಿದ್ದಾರೆ. ನಾಳೆ ಜೋಗಿಮಟ್ಟಿ ರಸ್ತೆಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

