ಸುದ್ದಿಒನ್, ಚಿತ್ರದುರ್ಗ ಫೆ. 27 : ನಗರಸಭಾ ಮಾಜಿ ಸದಸ್ಯರು ಹಾಗೂ ಜನತಾದಳದ ಹಿರಿಯ ಮುಖಂಡರಾದ ಬಾಂಡ್ ತಿಪ್ಪೇಸ್ವಾಮಿ [86 ವರ್ಷ] ಅನಾರೋಗ್ಯದ ಕಾರಣದಿಂದ ನಿನ್ನೆ (ಫೆ. 26)ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.
ಮೃತರಿಗೆ ಇಬ್ಬರು ಪುತ್ರರಿದ್ದಾರೆ. ಇವರು ಬಿಜೆಪಿ ಕಾರ್ಯಕರ್ತ ಯಶ್ವಂತ್ ಕುಮಾರ್ ಅವರ ತಂದೆಯವರಾಗಿದ್ದಾರೆ.
ನಗರದ ಕರುವಿನಕಟ್ಟೆ ಬಳಿಯಲ್ಲಿನ ಕಬೀರಾನಂದ ಶಾಲೆ ಹತ್ತಿರ ಇರುವ ಅವರ ನಿವಾಸಕ್ಕೆ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ತದ ನಂತರ 5 ಗಂಟೆಯಿಂದ ಜೋಗಿಮಟ್ಟಿ ರಸ್ತೆಯಲ್ಲಿನ ಕೆಂಚಮ್ಮನ ಕಟ್ಟೆ ಬಳಿಯಲ್ಲಿನ ಈಶ್ವರ ದೇವಸ್ಥಾನದ ಬಳಿಯಲ್ಲಿ ಮೃತರ ಅಂತ್ಯಕ್ರಿಯೆಯನ್ನು ನಡೆಸಲಾಯಿತು.
ಸಂತಾಪ : ನಗರಸಭಾ ಮಾಜಿ ಸದಸ್ಯರು ಹಾಗೂ ಜನತಾದಳದ ಹಿರಿಯ ಮುಖಂಡರಾದ ಬಾಂಡ್ ತಿಪ್ಪೇಸ್ವಾಮಿರವರ ನಿಧನಕ್ಕೆ ಸಂಸದ ಗೋವಿಂದ ಕಾರಜೋಳ ಸೇರಿದಂತೆ ಪಕ್ಷ ಬೇಧ ಮರೆತು ಹಲವು ಪಕ್ಷಗಳ ಮುಖಂಡರು ಸಂತಾಪವನ್ನು ಸೂಚಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








