Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಬೀದಿ ನಾಯಿ ದಾಳಿಗೆ ಬಾಲಕ ಸಾವು

Facebook
Twitter
Telegram
WhatsApp

ಚಿತ್ರದುರ್ಗ, (ಜು.24) : ಬೀದಿ ನಾಯಿ ದಾಳಿಗೆ 8 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಬಿಳಿಕಲ್ಲು ನಾಯಕರ ಹಟ್ಟಿಯಲ್ಲಿ‌ ನಡೆದಿದೆ.

ಯಶವಂತ್ (8) ಮೃತಪಟ್ಟ ದುರ್ಧೈವಿ. ಮೇದೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳಿಕಲ್ಲು ನಾಯಕರ ಹಟ್ಟಿ ಬಡಾವಣೆಯ  ಕೇಶವ ಮತ್ತು ರೇಖಾ ಅವರ ಮಗ. ಯಶವಂತ್ ಕಳೆದ ಎರಡು ದಿನಗಳ ಹಿಂದೆ ಮನೆಯ ಮುಂಭಾಗದಲ್ಲಿ ಆಟ ಆಡುತ್ತಿರುವಾಗ ಬೀದಿ ನಾಯಿಯೊಂದು ಏಕಾಏಕಿ ದಾಳಿ ಮಾಡಿ
ಯಶವಂತ್ ನ ಕಣ್ಣಿಗೆ ಐದಾರು ಬಾರೀ ಕಚ್ಚಿದೆ.

ಪರಿಣಾಮ ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದ ಯಶವಂತ್ ಕುಸಿದು ಬಿದ್ದಿದ್ದಾನೆ. ಕೂಡಲೇ ಪೋಷಕರು ಯಶವಂತ್ ನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ವೈದ್ಯರು ಬಾಲಕನ ಕಣ್ಣಿಗೆ ನಾಯಿ ಕಚ್ಚಿರುವುದರಿಂದ ವಿಷ (ನಂಜು) ಬಾಲಕನ ಮೇದುಳಿಗೆ ಏರಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ದಾರೆ.

ವೈದ್ಯರ ಸೂಚನೆ ಮೇರೆಗೆ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯಶವಂತ್ ಮೃತಪಟ್ಟಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

error: Content is protected !!