Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ರೋಗಿಗಳಿಗೆ ಉಪಹಾರ ವಿತರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 10 : ವಿದ್ಯಾನಗರದಲ್ಲಿರುವ ವಿಜಯ ಕಿರಣ ಪರಿಸರ ಜಾಗೃತಿ ಮತ್ತು ಕ್ಷೇಮಾಭಿವೃದ್ದಿ ಸಂಘದಿಂದ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಬಡ ರೋಗಿಗಳಿಗೆ ಉಪಹಾರ ವಿತರಿಸಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾದಾ ಸಾಹೇಬ್ ಡಾ.ಎನ್.ಮೂರ್ತಿ ಬಣದ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ ಮಾತನಾಡಿ ವಿಜಯ ಕಿರಣ ಪರಿಸರ ಜಾಗೃತಿ ಮತ್ತು ಕ್ಷೇಮಾಭಿವೃದ್ದಿ ಸಂಘದವರು ವಾರದಲ್ಲಿ ಎರಡು ದಿನ ಜಿಲ್ಲಾಸ್ಪತ್ರೆ ರೋಗಿಗಳಿಗೆ ಉಚಿತವಾಗಿ ಉಪಹಾರ ನೀಡಿ ಮಾನವೀಯತೆ ಮೆರೆಯುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಬಣ್ಣಿಸಿದರು.

ಜಿಲ್ಲಾಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ನೆರವಾಗಲಿ ಎನ್ನುವ ಆಶಯದಿಂದ ಕೈಗೊಂಡಿರುವ ಇಂತಹ ಸಮಾಜ ಸೇವೆಗೆ ದಾನಿಗಳು ಮುಂದೆ ಬಂದು ಕೈಜೋಡಿಸಿದರೆ ಪ್ರತಿನಿತ್ಯವೂ ರೋಗಿಗಳಿಗೆ ಉಪಹಾರ ವಿತರಿಸುವ ಚಿಂತನೆಯಿದೆ ಎಂದರು.
ಬಿಜೆಪಿ.ಯುವ ಮುಖಂಡರಾದ ಬಸವರಾಜ್ ಬಾಡ, ಗಿರೀಶ್, ರೆಡ್‍ಕ್ರಾಸ್ ಸಂಸ್ಥೆಯ ವಿಜಯಕುಮಾರ್, ನ್ಯಾಯವಾದಿ ಇಸ್ಮಾಯಿಲ್ ಜಬೀವುಲ್ಲಾ, ಗೃಹ ರಕ್ಷಕದಳದ ಕಾಂತರಾಜ್ ಮತ್ತು ಸಿಬ್ಬಂದಿ, ವಸಂತ್ ಡಿ, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now