ಸುದ್ದಿಒನ್, ಚಿತ್ರದುರ್ಗ, ಜುಲೈ.29 : ಚಿಕಿತ್ಸೆಗೆ ಬಂದಿದ್ದ ರೋಗಿಯಿಂದ ಲಂಚ ಪಡೆದಿದ್ದ ಆರೋಪದ ಮೇಲೆ ಜನರಲ್ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತು ಮಾಡಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಜನರಿಂದ ಹಣ ವಸೂಲಿ ಮಾಡುವ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಎಚ್ಚರಿಕೆಯ ಸಂದೇಶವನ್ನ ರವಾನಿಸಿದೆ.
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಬಂದಿದ್ದ ಚಂದ್ರಶೇಖರ್ ಎಂಬ ರೋಗಿಯಿಂದ 4 ಸಾವಿರ ರೂ. ಲಂಚ ಸ್ವೀಕಾರದ ವಿಡಿಯೋ ಸಾಮಾಜಿಕ ಮಾಧ್ಯಮ, ದೃಶ್ಯ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದ್ದವು.
ಬಡವರ ಬಳಿ ಲಂಚ ಪಡೆದ ಪ್ರಕರಣದ ಗಂಭೀರತೆಯನ್ನು ಅರಿತ ಆಯುಕ್ತರು ಲಂಚ ಪಡೆದ ಆರೋಪದ ಮೇಲೆ ಜಿಲ್ಲಾ ಆಸ್ಪತ್ರೆಯ ಜನರಲ್ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















