ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ : ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸ್ವೀಕರಿಸುವುದಕ್ಕೆ ವಿಳಂಭ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಸೌಲಭ್ಯಗಳನ್ನು ಪಡೆಯಲು ಕೂಡಲೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಬೇಕು. ಮೇ.30 ಕ್ಕೆ ಮುಕ್ತಾಯಗೊಂಡಿರುವ ಕಾರ್ಮಿಕ ಮಕ್ಕಳ ಶೈಕ್ಷಣಿಕ ಅರ್ಜಿಗಳ ಸ್ವೀಕಾರವನ್ನು ಆ.31 ರತನಕ ವಿಸ್ತರಿಸಬೇಕು. 2023 ರ ಅಧಿಸೂಚನೆಯನ್ನು ರದ್ದುಪಡಿಸಿ 2021 ರ ಅಧಿಸೂಚನೆ ಅನ್ವಯ ಶೈಕ್ಷಣಿಕ ಧನ ಸಹಾಯ ನೀಡಬೇಕು.
ಹೊಸದಾಗಿ ಅರ್ಜಿ ಸಲ್ಲಿಸುವುದು ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಬೇಕು.
ಕರ್ನಾಟಕ ಹೈಕೋರ್ಟ್ನ ಮಧ್ಯಂತರ ಆದೇಶದನ್ವಯ ಅಮೃತ ಹಾಗೂ ಅಕ್ಷತ ಎನ್ನುವ ವಿದ್ಯಾರ್ಥಿನಿಯರಿಗೆ ದಂಡ ಸಹಿತ ಶೈಕ್ಷಣಿಕ ಧನ ಸಹಾಯ ಪಾವತಿಸಬೇಕು. ಎಲ್ಲಾ ರೀತಿಯ ಖರೀಧಿಗಳನ್ನು ನಿಲ್ಲಿಸಿ ಜಾರಿಯಲ್ಲಿರುವ ಸೌಲಭ್ಯಗಳ ಧನ ಸಹಾಯವನ್ನು ನೇರ ವರ್ಗಾವಣೆ ಮೂಲಕ ಪಾವತಿಸಬೇಕೆಂದು ಪ್ರತಿಭಟನಾನಿರತರು ಒತ್ತಾಯಿಸಿದರು.
ಸಿಐಟಿಯು. ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‌ಪೀರ್, ಬಿ.ಕೆ.ನಾಗರಾಜಚಾರಿ, ಮಂಜುನಾಥ, ಮಹಮದ್ ಜಿಕ್ರಿಯಾವುಲ್ಲಾ, ರಾಘವೇಂದ್ರ, ಅಬ್ದುಲ್ಲಾ, ರಶೀದ್, ಉಮೇಶ್, ಶೇಖ್‌ಕಲೀಂವುಲ್ಲಾ, ಕೆ.ಎನ್.ನಾಗರಾಜ್, ಸೈಯದ್ ಮುಜ್ಜು ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…