Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ವೀರ ರಾಣಿ ಚೆನ್ನಮ್ಮ ಮಹಿಳಾ ಸಂಘದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 26  : ನಗರದ ಕೆಎಸ್‌ಎಫ್‌ಸಿ ಹಿಂಭಾಗದಲ್ಲಿರುವ ವೀರ ರಾಣಿ ಚೆನ್ನಮ್ಮ ಮಹಿಳಾ ಸಂಘದ ಕಾರ್ಯಾಲಯದಲ್ಲಿ ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.

ಸಂಘದ ಅಧ್ಯಕ್ಷರಾದ ಉಮಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅನ್ನಪೂರ್ಣ ಸಜ್ಜನ್, ಅನುಸೂಯ ಹೆಚ್., ಪ್ರೇಮಾ ಎಂ. ಹಾಗೂ ಪ್ರೀತಿ ಅವರು ಭಾಗವಹಿಸಿ, ನಾಡಿನ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಡಾ. ಕವಿತಾ ಯು.ಎಂ., ಡಾ. ಹೇಮಲತಾ ಕಟ್ಟಿ ಹಾಗೂ ಶೋಭಾ ಎಂ. ಅವರನ್ನು ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಸಂಘದ ಸಮಸ್ತ ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now