ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ಚಿತ್ರದುರ್ಗ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರಥಮ ಬಾರಿಗೆ ಮಧ್ಯಕರ್ನಾಟಕ ಕಾವ್ಯ ಸಂಭ್ರಮ ಎನ್ನುವ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಮಧ್ಯ ಕರ್ನಾಟಕ ಜಿಲ್ಲೆಗಳ ಕವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಚಿಕ್ಕಮಗಳೂರು-ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ ಘಟಕಗಳ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಈ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿ ಜಿಲ್ಲೆಯಿಂದ 12 ಕವಿಗಳು ಕಾವ್ಯಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಚಿತ್ರದುರ್ಗ ನಗರದ ಬಾಪೂಜಿ ಕಾಲೇಜಿನ ಸಭಾಂಗಣದಲ್ಲಿ ಜು. 27 ರಂದು ಭಾನುವಾರ ಈ ಕಾರ್ಯಕ್ರಮ ಜರುಗಲಿದೆ.
ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಚಿತ್ರದುರ್ಗದ ಕಲಾ ಕಾಲೇಜು ಪ್ರಾಚಾರ್ಯ ಡಾ.ಜೆ.ಕರಿಯಪ್ಪ ಮಾಳಿಗೆ ವಹಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್, ಚಿಕ್ಕಮಗಳೂರು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್, ದಾವಣಗೆರೆ ಕಸಾಪ ಅಧ್ಯಕ್ಷ ವಾಮದೇವಪ್ಪ, ಸೇರಿದಂತೆ ಮಧ್ಯಕರ್ನಾಟಕದ ಪ್ರಮುಖ ಕವಿಗಳು, ಕಸಾಪ ಪದಾಧಿಕಾರಿಗಳು ಕಾವ್ಯ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರುವ ಭಾಗವಹಿಸುವಂತೆ ಕಸಾಪ, ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಕೆ.ಎಂ.ಶಿವಸ್ವಾಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಕೆ.ಎಂ.ಶಿವಸ್ವಾಮಿ. ಅಧ್ಯಕ್ಷರು, ಕಸಾಪ, ಚಿತ್ರದುರ್ಗ. 9449510078
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







