Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಅಪ್ರಾಪ್ತೆ ಮದುವೆಯಾದ ಆರೋಪಿ ವಿರುದ್ದ ಎಫ್.ಐ.ಆರ್ ದಾಖಲು

---Advertisement---

 

ಚಿತ್ರದುರ್ಗ. ಆಗಸ್ಟ್.01: ಚಿತ್ರದುರ್ಗ ತಾಲ್ಲೂಕಿನಲ್ಲಿ ಬಚ್ಚಬೋರನಟ್ಟಿ ಗ್ರಾಮದ ಬಾಲ್ಯ ವಿವಾಹ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯ ಮದುವೆಯಾದ ಆರೋಪಿ ವಿರುದ್ದ ಎಫ್.ಐ.ಆರ್ ದಾಖಲಿಸಲಾಗಿದೆ.

ಹಿರಿಯೂರು ತಾಲ್ಲೂಕಿನ ಯಲ್ಲಕರನಹಳ್ಳಿ ಗ್ರಾಮದ ಹರೀಶ್ ಬಿನ್ ಪಾಲಯ್ಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಬಾಲ್ಯ ವಿವಾಹವಾಗಿದ್ದ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಘಟನೆಯನ್ನು ಪರಿಶೀಲಿಸಿ, ಚಳ್ಳಕೆರೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ವರದಿ ಕಳುಹಿಸಿಕೊಡಲಾಗಿತ್ತು.

ಇದನ್ನು ಆಧರಿಸಿ ಜುಲೈ 29 ರಂದು ನಾಯಕನಹಟ್ಟಿ ಪೊಲೀಸ್ ಠಾಣೆಯಲಿ, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಆರೋಪಿ ಹರೀಶ್ ವಿರುದ್ದ ಚಳ್ಳಕೆರೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment