Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಭೀಮೇಶ್ವರ ಶಾಲೆಯಲ್ಲಿ ಮಕ್ಕಳ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 14 : ಮಕ್ಕಳು ತಂತ್ರಜ್ಞಾನವನ್ನು ಬಳಸಿಕೊಂಡು ನೀವು ನಿಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಜಿಎಸ್ ಅನಿತ ಕುಮಾರ್ ಹೇಳಿದರು.

ತಾಲ್ಲೂಕಿನ ಭೀಮಸಮುದ್ರದ ಶ್ರೀ ಭೀಮೇಶ್ವರ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ
ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು ಸಮಾಜ ಹಾಗೂ ಪ್ರಪಂಚ ಎಂಬುದು ಒಂದು ಕುಟುಂಬ. ನಾವು ಇಲ್ಲಿ ನಮ್ಮ ಬದುಕನ್ನು ಕಟ್ಟಿಕೊಳ್ಳಬೇಕು. ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ಮಕ್ಕಳು ಒಳ್ಳೆಯ ವಿದ್ಯಾಭ್ಯಾಸವನ್ನು ಮಾಡಬೇಕು. ಸ್ವಾವಲಂಬಿಯಾಗಿ ಬದುಕನ್ನು ರೂಪಿಸಿಕೊಳ್ಳಿ. ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು. ಶಾಲೆಗೆ ಹಾಗೂ ತಂದೆ ತಾಯಿಗಳಿಗೆ ಒಳ್ಳೆಯ ಹೆಸರನ್ನು ತರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಸಲಹಾ ಸಮಿತಿ ಸದಸ್ಯರಾದ ಬಿ.ಕೆ. ಕಲ್ಲಪ್ಪ ನವರು ಮಾತನಾಡಿ ಪೋಷಕರು ಮಕ್ಕಳನ್ನು ಮನೆಯಲ್ಲಿ ದಿನನಿತ್ಯ ಶಾಲೆಯಿಂದ ಬಂದ ಮೇಲೆ ಅವರಿಗೆ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸುವಂತೆ ಉತ್ತೇಜನ ನೀಡಬೇಕು ಎಂದು ಹೇಳಿದರು.

ಶಾಲೆಯ ಸಲಹಾ ಸಮಿತಿಯ ಸದಸ್ಯರಾದ ಮಾನಂಗಿ ಜಯಪ್ಪ ಮಾತನಾಡಿ ಪೋಷಕರಿಗೆ ಮಕ್ಕಳು ನಮ್ಮ ಆಸ್ತಿ ಇದ್ದಂತೆ ನಾವು ಹೂಡಿಕೆ ಪ್ರಮಾಣದಲ್ಲಿ ನೋಡಿದರೆ ನಾನೇ ಉದಾಹರಣೆ ನನ್ನ ಮಕ್ಕಳು ಈಗ ಹೊರದೇಶದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಗಳಾಗಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಹಾಲಮ್ಮ ಮಲ್ಲಿಕಾರ್ಜುನಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ 200 ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು .

ಸಲಹಾ ಸಮಿತಿ ಸದಸ್ಯರುಗಳಾದ ಕುಮಾರ್, ಮಹೇಶ್ವರಪ್ಪ ಹಾಗೂ ಮುಖ್ಯ ಉಪಾಧ್ಯಾಯರಾದ ಸುಮಾ ಎಲ್. ಕೆ. ಮಮತಾ, ಕೋಮಲದೇವಿ, ಪ್ರದೀಪ್ ಕುಮಾರ್, ಗಿರೀಶ್, ಐಶ್ವರ್ಯ, ಸಿಂಧು ಹಾಗೂ ಶಾಲೆಯ ಮಕ್ಕಳ ಪೋಷಕರು ಗ್ರಾಮದ ಮುಖಂಡರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now